ರಾಜಕೀಯ

ಬೆಂಗಳೂರು : ಅಂಬೇಡ್ಕರ್ ಬಯಸಿದ್ದ ಸಮಾಜ ನಿರ್ಮಿಸಲು ಸರ್ಕಾರದಿಂದ ಪ್ರಾಮಾಣಿಕ ಪ್ರಯತ್ನ: ಸಿಎಂ ಸಿದ್ದರಾಮಯ್ಯ

ಸರ್ಕಾರ ಅಂಬೇಡ್ಕರ್ ಅವರು ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನ ಮಾಡುತ್ತಿದ್ದು, ಅವರು ಬಯಸಿದಂತ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಸಂವಿಧಾನ ಶಿಲ್ಪಿ ಡಾ: ಬಿ. ಆರ್.ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ‘ನಮ್ಮ ಸರ್ಕಾರವತ್ಯಂತ ಗೌರವ, ನಮ್ರತೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ದಿನವನ್ನು ಆಚರಿಸುತ್ತಿದೆ. ಅಂಬೇಡ್ಕರ್ ಅವರು ಕೇವಲ ದಲಿತರ ನಾಯಕರಾಗಿರದೇ ಸಮಾಜದಲ್ಲಿ ಶೋಷಿತರು, ಅನ್ಯಾಯ ಹಾಗೂ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅನ್ಯಾಯದಿಂದ ಮುಕ್ತಿ ಪಡೆಯಬೇಕೆಂದು ತಮ್ಮ ಬದುಕನ್ನೇ ಮುಡಿಪಾಗಿಟ್ಟಿದ್ದರು.’

 

ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರುಮಹಾನ್ ‘ಮೇಧಾವಿಯಾಗಿದ್ದ ಅಂಬೇಡ್ಕರ್, ಅವರ ಸ್ವಾರ್ಥಕ್ಕಾಗಿ ಓದಿಕೊಳ್ಳದೆ ಶೋಷಿತರ, ಅಸ್ಪೃಶ್ಯತೆಯಿಂದ ನರಳುತ್ತಿರುವ ಜನರಿಗೆ ವಿಮೋಚನೆ ನೀಡಲೆಂದೇ ಜ್ಞಾನಾರ್ಜನೆ ಮಾಡಿಕೊಂಡಿದ್ದರು. ದೇಶದ ಕೆಲವೇ ಮೇಧಾವಿಗಳಲ್ಲಿ ಅವರೂ ಒಬ್ಬರು. ದೇಶ ಕಂಡ ಮಹಾನ್ ನಾಯಕರು ಹಾಗೂ ಮಾನವತಾವಾದಿ. ಎಲ್ಲರೂ ಮನುಷ್ಯರಾಗಿ ಬದುಕಬೇಕು. ಸಮಾಜದಲ್ಲಿ ಎಲ್ಲರಿಗೂ ಸಮಾನತೆ ದೊರಕಬೇಕು. ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಬೇಕು. ಹಾಗಾದಾಗ ಮಾತ್ರ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಗುತ್ತದೆ. ಮಹಿಳೆಯರು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರಾಗಬೇಕು. ಅಸ್ಪೃಶ್ಯತೆ ನಾಶವಾಗಬೇಕು ಎಂದು ಅಂಬೇಡ್ಕರ್ ಶ್ರಮಿಸಿದ್ದರು ‘ಎಂದರು.

‘ಮನುವಾದಿಗಳು ಇಂದು ಗಾಂಧಿ ಮತ್ತು ಅಂಬೇಡ್ಕರ್ ಅವರನ್ನು ತಮ್ಮ ಸ್ವಂತ ಎಂಬಂತೆ ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ’

ಇತ್ತೀಚೆಗೆ ಕೆಲವರು ಮಹಾತ್ಮಾ ಗಾಂಧಿ ಹಾಗೂ ಅಂಬೇಡ್ಕರ್ ಅವರನ್ನು ತಮಗೆ ಸೇರಿದವರೆಂದು(own) ಬಿಂಬಿಸಲು ಪ್ರಾರಂಭಿಸಿದ್ದಾರೆ. ಮಹಾತ್ಮಾ ಗಾಂಧಿಯವರನ್ನು ಕೊಂದವರು, ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ ಮನುವಾದಿಗಳೇ ಇಂದು ಅವರನ್ನು ತಮ್ಮ ಸ್ವಂತ ಎನ್ನಲು ಪ್ರಾರಂಭಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ ನಾಲ್ಕೈದು ದಿನಗಳಲ್ಲೇ ‘ದಿ ಆರ್ಗನೈಜರ್’ ಪತ್ರಿಕೆಯಲ್ಲಿ ವಿರೋಧ ಮಾಡಿ ಬರೆದಿದ್ದರು. ಈಗ ಅಂಬೇಡ್ಕರ್ ಅವರನ್ನು ಕಾಂಗ್ರೆಸ್ ಸೋಲಿಸಿತ್ತು ಎಂದು ಮಾತನಾಡುತ್ತಾರೆ. ಅಂಬೇಡ್ಕರ್ ಅವರೇ ನನ್ನನ್ನು ಸೋಲಿಸಿದವರು ಸಾವರ್ಕರ್ ಮತ್ತು ಕಮ್ಯುನಿಸ್ಟ್ ನಾಯಕ ಎಸ್.ಎ ಡಾಂಗೆ ಎಂದು ಪತ್ರ ಬರೆದಿದ್ದರು. ಬಿಜೆಪಿ ಸ್ವಾರ್ಥಕ್ಕಾಗಿ ಮಹಾತ್ಮಾ ಗಾಂಧಿ, ಸರ್ದಾರ್ ವಲ್ಲಭಭಾಯ್ ಪಟೇಲ್, ಅಂಬೇಡ್ಕರ್ ಅವರನ್ನು ತಮ್ಮದೇ ಸ್ವಂತ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ. ಅಂಬೇಡ್ಕರ್ ಅವರು ‘ನಾನು ಹಿಂದೂ ಆಗಿ ಹುಟ್ಟಿದೆ ಆದರೆ ಹಿಂದೂವಾಗಿ ಸಾಯಲಾರೆ’ ಎಂದು ಹೇಳಿದ್ದರು. ಹಿಂದೂ ಧರ್ಮ ತ್ಯಜಿಸಿ ಭೌದ್ಧ ಧರ್ಮವನ್ನು ಸ್ವೀಕಾರ ಮಾಡಿದರು. ಹಿಂದೂ ಧರ್ಮದ ಸುಧಾರಣೆಗೆ ಪ್ರಯತ್ನಿಸಿ, ಅದು ಸಾಧ್ಯವಾಗುವುದಿಲ್ಲ ಎಂದು ಅರಿವಾದ ನಂತರ ಹಿಂದೂ ಧರ್ಮವನ್ನು ತ್ಯಜಿಸಿ, ಮಾನವೀಯತೆ ಮತ್ತು ಸಮಾನತೆ ಇದ್ದ ಭೌದ್ಧ ಧರ್ಮವನ್ನು ಸ್ವೀಕರಿಸಿದರು ಎಂದರು.

ನೆಹರೂ ಅಂಬೇಡ್ಕರ್ ಅವರನ್ನು ವಿರೋಧಿಸಲಿಲ್ಲಬಿಜೆಪಿಯವರು ಜವಾಹಾರ್ ನೆಹರೂ ಅವರನ್ನು ವಿರೋಧಿಸುತ್ತಾರೆ. ಅಂಬೇಡ್ಕರ್ ಅವರನ್ನು ನೆಹರೂ ವಿರೋಧಿಸಲಿಲ್ಲ. ಹಾಗಿದ್ದರೆ, ಅಂಬೇಡ್ಕರ್ ಅವರನ್ನು ಸಂವಿಧಾನ ಬರೆಯಲು ಆಯ್ಕೆ ಮಾಡುತ್ತಿರಲಿಲ್ಲ. ಹಿಂದೂ ಕೋಡ್ ಬಿಲ್ ತಂದಾಗ ನೆಹರೂ ಅದರ ಪರವಾಗಿಯೇ ಇದ್ದರು. ನಮ್ಮಲ್ಲಿರುವ ಕೆಲವು ಶಕ್ತಿಗಳು ನೆಹರೂ ಅವರು ಅದನ್ನು ಜಾರಿ ಮಾಡಲು ಬಿಡಲಿಲ್ಲ. ಆದರೆ ಹಿಂದೂ ಕೋಡ್ ಬಿಲ್ ನಲ್ಲಿರುವ ಅಂಶಗಳನ್ನು ನೆಹರೂ ಅವರು ಅವರ ಅಧಿಕಾರದ ಅವಧಿಯಲ್ಲಿ ಜಾರಿ ಮಾಡುವ ಪ್ರಯತ್ನ ಮಾಡಿದ್ದರು ಎಂದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಸರ್ಕಾರ ಅಧಿಕೃತವಾಗಿ ಘೋಷಿಸಿರುವ ದಸರಾ ರಜೆಯ ಅವಧಿಯಲ್ಲಿ ತರಗತಿ ಹಾಗೂ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಶ್ರೀರಾಮ ಸೇನೆಯ ರಾಷ್ಟ್ರೀಯ…

18 hours ago

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ತಾಲೂಕಿನ ನಾಲ್ಕೂರು ಗ್ರಾಮದ ಪಾಡಿ ಎಂಬಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮಾನವನ ಅಸ್ಥಿಪಂಜರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಬಳಂಜ ಪಾಡಿ…

19 hours ago

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ನಗರದ ಗೀತಾಂಜಲಿ ಸಿಲ್ಕ್ಸ್ ರಸ್ತೆಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳು ಏಕಕಾಲದಲ್ಲಿ ಹಾರಾಡಿದ್ದು, ಸಾರ್ವಜನಿಕರ ಗಮನ ಸೆಳೆಯಿತು. ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿಗಳ…

19 hours ago

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟರ ಸಂಘ ಮುಂಬೈನ ಜ್ಞಾನ ಮಂದಿರ ಸಮಿತಿಯ ವತಿಯಿಂದ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ ಕಾರ್ಯಕ್ರಮವು ಸೆ.26ರಂದು ಕುರ್ಲಾದ ಶ್ರೀಮತಿ…

19 hours ago

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಎಬಿವಿಪಿ ಸಂಘಟನೆಯ ಮೂಲಕ ಸಾಮಾಜಿಕ ಹಾಗೂ ಸಂಘಟನಾ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಪ್ರದೀಪ್ ಅಜ್ಜಿಬೆಟ್ಟು ಅವರನ್ನು ಹಿಂದೂ ಜಾಗರಣಾ ವೇದಿಕೆಯ…

19 hours ago

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬ್ಯಾಟಿಯಾಣಿ ಎಂಬಲ್ಲಿ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಕೆಂಪುಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳಕ್ಕೆ ಬೈಂದೂರು ಪೊಲೀಸರು…

6 days ago