ಮನೆಯಲ್ಲಿ ಮಲಗಿದ್ದ ವೇಳೆ ಹಾವು ಕಚ್ಚಿ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತಾಲೂಕಿನ ಹೊಸ ಮೋಕಾ ಗ್ರಾಮದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.

ಗ್ರಾಮದ ಲಕ್ಷ್ಮಣ ಹಾಗೂ ಶೇಖಮ್ಮ ದಂಪತಿ ಪುತ್ರಿ, ಸರ್ಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದ ಶ್ರಾವಣಿ (16) ಮೃತಪಟ್ಟ ಬಾಲಕಿ. ರಾತ್ರಿ ಊಟ ಮಾಡಿ ಮಲಗಿದ ಬಳಿಕ ಬಾಲಕಿಯ ಕೈ ಮತ್ತು ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಸ್ಥಳೀಯ ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆಯಾದರೂ ಚಿಕಿತ್ಸೆ ಫಲಿಸದೆ ಶ್ರಾವಣಿ ಮೃತಪಟ್ಟಿದ್ದಾಳೆ. ಬೆಳಗ್ಗೆ ಮನೆಯಲ್ಲಿ ಹುಡಕಾಟ ನಡೆಸಿದ ಸ್ಥಳೀಯರು ಹಾವನ್ನು ಹೊಡೆದು ಕೊಂದಿದ್ದಾರೆ.



