ಪರೀಕ್ಷಾ ಭಯದಿಂದ ದಂತ ವೈದ್ಯಕೀಯ ವಿದ್ಯಾರ್ಥಿನಿ ಅಪಾರ್ಟ್ ಮೆಂಟ್‌ನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಹೆಬ್ಬಾಳದ ಸುಮಂಗಲಿ ಸೇವಾಶ್ರಮ ರಸ್ತೆಯ ಅಪಾರ್ಟ್‌ಮೆಂಟ್ ನಿವಾಸಿ ಸೌಮ್ಯಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾ ರ್ಥಿನಿ. ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಂಧ್ರಪ್ರದೇಶ ಮೂಲದ ಗಣೇಶ್ ನಾರಾಯಣ್ ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದು, ಇವರ ಪುತ್ರಿ ಸೌಮ್ಯಾ ಯಶವಂತಪುರದ ಖಾಸಗಿ ಕಾಲೇಜಿನಲ್ಲಿ 2ನೇ ವರ್ಷದ ದಂತ ವೈದ್ಯಕೀಯ ಕೋರ್ಸ್ ವ್ಯಾಸಂಗ ಮಾಡುತ್ತಿದ್ದರು. ಸೌಮ್ಯಾ ಪರೀಕ್ಷಾ ಖಿನ್ನತೆಗೆ ಒಳಗಾಗುತ್ತಿದರು ಎಂದು ತಿಳಿದು ಬಂದಿದೆ.



