ಉಡುಪಿ ಜಿಲ್ಲೆಯಲ್ಲಿ ಬಂದ ದಿಢೀರ್ ಬಿರುಗಾಳಿ, ಮಳೆಯಿಂದ ಹಲವೆಡೆ ಹಾನಿ ಸಂಭವಿಸಿದೆ. ಅಲ್ಲಲ್ಲಿ ಮರಗಳು ಬಿದ್ದ ಪರಿಣಾಮ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತು. ನಗರದ ಕಟ್ಟೆ ಆಚಾರ್ಯ ಮಾರ್ಗದಲ್ಲಿ ಬೃಹತ್ ಮರ ಉರುಳಿದ ಪರಿಣಾಮ ಇಬ್ಬರು ಗಾಯಗೊಂಡರು.
ಭಾನುವಾರ ಸಂಜೆ 4 ಗಂಟೆ ಸುಮಾರಿಗೆ ಏಕಾಏಕಿ ಬೀಸಿದ ಗಾಳಿ, ಮಳೆಗೆ ಜನ ಅಕ್ಷರಶಃ ದಿಕ್ಕಾಪಾಲಾದ ಘಟನೆ ನಡೆಯಿತು. ಉಡುಪಿಯ ರಾಜಾಂಗಣ ಚಿತ್ಪಾಡಿ ರಸ್ತೆಯಲ್ಲಿ ಮರವೊಂದು ಉರುಳಿ ಬಿದ್ದ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿತು. ಇನ್ನು ಭಾರೀ ಗಾಳಿಮಳೆಗೆ ಹಿರಿಯಡ್ಕ ಸಮೀಪ ಇಂದಿರಾ ಸೇರಿಗಾರ್ತಿ ಎಂಬವರಿಗೆ ಸೇರಿದ ಮನೆಯ ಮೇಲ್ಪಾವಣಿ ಹಾರಿಹೋಗಿದೆ.ಮನೆಯ ವಿದ್ಯುತ್ ಸಂಪರ್ಕದ ಕಂಬದ ವಯರ್ ಕೂಡ ಛಿದ್ರಗೊಂಡಿದೆ.
ಘಟನೆಯಲ್ಲಿ ಅಂದಾಜು ಮೂರು ಲಕ್ಷ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ. ಇದಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ಧರೆಗುಳಿದ ಬಗ್ಗೆ ವರದಿಯಾಗಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…