‘ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನೀಡಿರುವ ವರದಿ ವೈಜ್ಞಾನಿಕವಾಗಿ ಸಿದ್ಧಪಡಿಸಿದ ವರದಿ. ಅದನ್ನು ಅವೈಜ್ಞಾನಿಕ ಎಂದು ಕರೆಯುವಂತಿಲ್ಲ. ಇದು ಜಾತಿ ಗಣತಿ ಅಲ್ಲವೇ ಅಲ್ಲ. ಇದು ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ತಯಾರಿಸಿದ ಸಾಮಾಜಿಕ ಹಾಗೂ ಆರ್ಥಿಕ ಸಮೀಕ್ಷಾ ವರದಿ. ಮಾಡಿರುವ ಸಮೀಕ್ಷೆಗಳಲ್ಲಿ ಜಾತಿ ಒಂದು ಅಂಶ ಅಷ್ಟೇ’ ಎಂದು ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾನು ರಾಜ್ಯ ಸರಕಾರಕ್ಕೆ ಸಲ್ಲಿಸಿದ್ದ ವರದಿಯ ಕುರಿತಂತೆ ಎ.17 ರಂದು ಕ್ಯಾಬಿನೆಟ್‌ನಲ್ಲಿ ಚರ್ಚೆಯಾದ ಬಳಿಕ ಹೇಳಿಕೆ ನೀಡೋಣ ಎಂದು ನಿರ್ಧರಿಸಿದ್ದೆ. ಆದರೆ ಪ್ರಸ್ತುತ ಒಬ್ಬೊಬ್ಬರು ಒಂದೊಂದು ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಈ ಬಗ್ಗೆ ರಾಜ್ಯದ ಜನರಲ್ಲಿ ಹಾಗೂ ಕೆಲವು ವರ್ಗದಲ್ಲಿ ಗೊಂದಲ ಉಂಟಾಗಿರುವುದರಿಂದ ಸ್ಪಷ್ಟನೆ ನೀಡಬೇಕಾಗಿದೆ ಎಂದರು.
ಕೆಲವರಿಗೆ ತಮ್ಮ ಜಾತಿ ಬಿಟ್ಟು ಹೋಗಿದೆ ಎಂಬ ಅಭಿಪ್ರಾಯವಿದೆ. ರಾಜ್ಯದಲ್ಲಿ ಎಷ್ಟು ಜಾತಿಗಳಿವೆಯೋ ಎಲ್ಲವನ್ನೂ ಈ ವರದಿಯಲ್ಲಿ ಒಳಗೊಳಿಸಲಾಗಿದೆ. ಈ ಸಂಖ್ಯೆ ಎಷ್ಟು ಎಂದು ಈಗ ನಾನು ಹೇಳಲು ಸಾಧ್ಯವಿಲ್ಲ. ನಾವು ಜಾತಿ ಹೇಳುವುದಿಲ್ಲ ಎಂದು ಕೆಲವರು ಹೇಳಿದ್ದಾರೆ. ಕೆಲವರು ತಮ್ಮ ಜಾತಿಯ ಬಗ್ಗೆ ಮಾಹಿತಿ ಇಲ್ಲದವರು ಸಹ ಇದ್ದಾರೆ. ಇಂತಹ ಸುಮಾರು ಐನೂರು ಜಾತಿಗಳು ಸಿಕ್ಕಿವೆ. ಹೀಗಾಗಿ ವರದಿಯಲ್ಲಿ ಜಾತಿಯ ಸಮೀಕ್ಷೆ ಆಗಿಲ್ಲ ಎಂದು ಹೇಳುವುದು ಸರಿಯಲ್ಲ ಎಂದು ಹೆಗ್ಡೆ ಸ್ಪಷ್ಟ ಪಡಿಸಿದರು.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ. ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ,…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…