ಕಾವಳಪಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ವಗ್ಗ ಎಂಬಲ್ಲಿ ನೂತನವಾಗಿ ನಿರ್ಮಿಸಲಾದ ಡಿಜಿಟಲ್ ಗ್ರಂಥಾಲಯ, ಮಾಹಿತಿ ಅರಿವು ಕೇಂದ್ರ , ಘನತ್ಯಾಜ್ಯ ಘಟಕದ ಉದ್ಘಾಟನೆ ಹಾಗೂ ಹಿಂದೂ ರುದ್ರಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಎ.16 ರಂದು ಬುಧವಾರ ನಡೆಯಲಿದೆ ಎಂದು ಗ್ರಾಮಪಂಚಾಯತ್ ಅಧ್ಯಕ್ಷರಾದ ಲಕ್ಮೀನಾರಾಯಣ ಶರ್ಮ ಅವರು ತಿಳಿಸಿದ್ದಾರೆ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಸಹಿತ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.



