ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಅಂಗಡಿಗೆ ನುಗ್ಗಿ ಮಹಿಳೆಗೆ ಬೆಂಕಿ ಹಚ್ಚಿದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಬೇಡಡ್ಕ ನಿವಾಸಿ ರಮಿತಾ ( 22) ಮೃತ ಮಹಿಳೆ ಎಂದು ತಿಳಿದು ಬಂದಿದೆ. ತಮಿಳುನಾಡು ಮೂಲದ ರಾಮಕೃತ (57) ಬೆಂಕಿ ಹಚ್ಚಿದ ಆರೋಪಿಯಾಗಿದ್ದಾನೆ.
ಮೃತ ರಮಿತಾ ಬೇಡಡ್ಕದ ಮನ್ನಡ್ಕ ಎಂಬಲ್ಲಿ ಅಂಗಡಿ ನಡೆಸುತ್ತಿದ್ದರು. ಆರೋಪಿ ರಾಮಕೃತ ಪಾನಮತ್ತನಾಗಿ ಬಂದು ಆಕೆಗೆ ದಿನನಿತ್ಯ ಕಿರುಕುಳ ನೀಡುತ್ತಿದ್ದನು. ಈ ಬಗ್ಗೆ ರಮಿತಾ ಬೇಡಡ್ಕ ಠಾಣಾ ಪೊಲೀಸರಿಗೆ ದೂರು ನೀಡಿದ್ದರು. ಇದೇ ಕಾರಣಕ್ಕೆ ವೈಷಮ್ಯದಿಂದ ಎ.8 ರಂದು ಸಂಜೆ 3 ಗಂಟೆಗೆ ಅಂಗಡಿಯೊಳಗೆ ನುಗ್ಗಿದ ಆರೋಪಿ ಯುವತಿಗೆ ಟಿನ್ನರ್ ಸುರಿದು ಬೆಂಕಿ ಹಚ್ಚಿದ್ದನು. ಕೃತ್ಯ ನಡೆಸಿ ಪರಾರಿಯಾಗಲೆತ್ನಿಸಿದ್ದ ಆರೋಪಿಯನ್ನು ನಾಗರಿಕರು ಹಿಡಿದು ಪೊಲೀಸರಿಗೊಪ್ಪಿಸಿದ್ದರು.
ತೀವ್ರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಯುವತಿ ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…