ಬ್ರಿಶಾ.ಬಿ.ಇರಾ ಮೂಲತಃ ಮಂಗಳೂರಿನ ಇರಾ ಗ್ರಾಮದವರಾದ ಇವರು ಭಾಸ್ಕರ್ ಇರಾ ಮತ್ತು ಸಂಜನಾ ಬಿ ಇರಾ ಇವರ ಸುಪುತ್ರಿ. ಪ್ರಸ್ತುತ ವಿಜಯಪುರದ ವಿದ್ಯಾ ವಿಕಾಸ್ ಮಂದಿರ ಸ್ಕೂಲ್ ನಲ್ಲಿ ಯುಕೆಜಿ ವ್ಯಾಸಂಗ ಮಾಡುತ್ತಿದ್ದಾರೆ.
ಇವರು ಭರತನಾಟ್ಯ ವೆಸ್ಟರ್ನ್ ಡ್ಯಾನ್ಸ್ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಭರವಸೆ ಮೂಡಿಸುವ ಪ್ರತಿಭೆಯಾಗಿದ್ದು, ಇವರು ತನ್ನ ನಾಲ್ಕನೇ ವಯಸ್ಸಿನಿಂದಲೇ ಭರತನಾಟ್ಯ ಅಭ್ಯಾಸವನ್ನು ಕುಮಾರಿ ಪೂರ್ವಿ ಎನ್ ತಳ್ವಾರ್ ಇವರಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಭರತನಾಟ್ಯದಲ್ಲಿ 2024ರಲ್ಲಿ ಮೈಸೂರಿನಲ್ಲಿ ನಡೆದಿರುವ ಲಾಸ್ಯ ನವರಸೋ ಉತ್ಸವದಲ್ಲಿ ಲಾಸ್ಯಸಂಗಮ ಪ್ರಶಸ್ತಿ ಬೆಂಗಳೂರಿನಲ್ಲಿ ನಡೆದ ಡ್ಯಾನ್ಸ್ ರಿದಂ 2025 ಭಾಗವಹಿಸಿ ಪ್ರಶಸ್ತಿಯನ್ನು ಪಡೆದು ಕೀರ್ತಿ ತಂದಿದ್ದಾರೆ.
ಅಲ್ಲದೆ ಮಂಗಳೂರು ಬೆಳಗಾವಿ, ಅಥಣಿ ,ಮುಧೋಳ್, ವಿಜಯಪುರ ಮುಂತಾದ ಕಡೆ 30ಕ್ಕೂ ಹೆಚ್ಚು ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನ ಮಾಡಿ ಅಭಿನಂದನ ಪತ್ರ ಪಡೆದುಕೊಂಡಿದ್ದು, ಅನ್ ಲೈನ್ ಸ್ಪರ್ಧೆಯಲ್ಲಿಯೂ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಬ್ರಿಶಾ ನಾಟ್ಯದಲ್ಲಿ ಮಾತ್ರವಲ್ಲದೇ ಚಿನ್ನರ ಚಿತ್ತಾರ ಡ್ರಾಯಿಂಗ್ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿದ್ದಾರೆ. ವಾಯ್ಸ್ ಆಫ್ ಆರಾಧನಾ ತಂಡದಲ್ಲಿ ಭಾಗವಹಿಸಿ ಮಾರ್ಚ್ ತಿಂಗಳ ವಿಜೇತರಾಗಿ ಹೊರ ಹೊಮ್ಮಿರುವುದು ವಿಶೇಷ.
ಇವರಿಗೆ ಹಲವಾರು ಪ್ರಶಸ್ತಿಗಳು ದೊರಕಿದ್ದು, ಕರ್ನಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಬೆಂಗಳೂರು ಹಾಗೂ ಗಡಿನಾಡು ನುಡಿ ರಾಷ್ಟ್ರೀಯ ವಾರ್ತ ಪತ್ರಿಕೆ, ಇವರ ಸಂಯುಕ್ತ ಆಶ್ರಯದಲ್ಲಿ ಗಡಿನಾಡು ಸಾಂಸ್ಕೃತಿಕ ಉತ್ಸವ 2025 ಕರ್ನಾಟಕ ಬಾಲ್ಯ ನಾಟ್ಯ ರಾಣಿ ಪ್ರಶಸ್ತಿ ಅಲ್ಲದೆ ಸಮಾಜ ಕಲ್ಯಾಣ ಸಂಸ್ಥೆ ಬೆಂಗಳೂರು ಹಾಗೂ ವಿಶ್ವ ಕನ್ನಡ ಜಾನಪದ ಪರಿಷತ್ ಬೆಂಗಳೂರು ಇವರ ಆಶ್ರಯದಲ್ಲಿ ಸುವರ್ಣ ಕರ್ನಾಟಕ ನಾಟ್ಯ ಮಯೂರಿ ಪ್ರತಿಭಾ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…