ಜನ ಮನದ ನಾಡಿ ಮಿಡಿತ

Advertisement

ಸುಳ್ಯ : SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಸವಣೂರಿನಲ್ಲಿ ‘ಸಾಮಾಜಿಕ ನ್ಯಾಯ ದಿನಾಚರಣೆ’

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರಿನಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್‌ರವರ ಸಭಾಧ್ಯಕ್ಷತೆಯಲ್ಲಿ “ಸರ್ವಾಧಿಕಾರ ಅಳಿಯಲಿ, ಸಂವಿಧಾನ ಉಳಿಯಲಿ” ಎಂಬ ಘೋಷಣೆಯೊಂದಿಗೆ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸಲಾಯಿತು.

ಸಭೆಯನ್ನು ಉದ್ದೇಶಿಸಿ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಮಾತನಾಡಿ, ಸದಾ ದೀನರ ಪರವಾಗಿದ್ದ ಅಂಬೇಡ್ಕರ್‌ರವರ ಜೀವನಶೈಲಿ, ಹೋರಾಟದ ಕುರಿತು ಸವಿಸ್ತಾರವಾಗಿ ವಿವರಿಸಿದರು‌.

ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ನವಾಝ್ ಶರೀಫ್ ಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ದಲಿತ ಮುಖಂಡ, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲ್, ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸುಳ್ಯ ವಿಧಾನಸಭಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ ಎ ಸಾಮಾಜಿಕ ನ್ಯಾಯ ದಿನಾಚರಣೆಯ ಬಗ್ಗೆ ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಿರಾಝ್ ಸುಳ್ಯ, ಸವಣೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಚೆನ್ನು, ಎಸ್ ಡಿಪಿಐ ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ.ಎ, ದಲಿತ ಮುಖಂಡರಾದ ಗಣೇಶ್ ಗುರಿಯಾನ, ಎಲ್ ಐಸಿ ಪ್ರತಿನಿಧಿ ಶೇಖರ ಸವಣೂರು, ಎಸ್ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರು ಹಾಗೂ ದಲಿತ ಮುಖಂಡರಾದ ವಿಶ್ವನಾಥ ಪುಂಚತ್ತಾರು, ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಮೀನಾಕ್ಷಿ, ಸಜಿಪ ನಡು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಶೀಲ ಆನಂದ ಉಪಸ್ಥಿತರಿದ್ದರು.ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಸ್ವಾಗತಿಸಿದರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!