ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ 134 ನೇ ಅಂಬೇಡ್ಕರ್ ಜಯಂತಿ ಅಂಗವಾಗಿ ಸುಳ್ಯ ವಿಧಾನಸಭಾ ಕ್ಷೇತ್ರದ ಸವಣೂರಿನಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಇನಾಸ್ ರೋಡ್ರಿಗಸ್‌ರವರ ಸಭಾಧ್ಯಕ್ಷತೆಯಲ್ಲಿ “ಸರ್ವಾಧಿಕಾರ ಅಳಿಯಲಿ, ಸಂವಿಧಾನ ಉಳಿಯಲಿ” ಎಂಬ ಘೋಷಣೆಯೊಂದಿಗೆ ಸಾಮಾಜಿಕ ನ್ಯಾಯ ದಿನಾಚರಣೆಯನ್ನು ಆಚರಿಸಲಾಯಿತು.
ಸಭೆಯನ್ನು ಉದ್ದೇಶಿಸಿ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ಮಾತನಾಡಿ, ಸದಾ ದೀನರ ಪರವಾಗಿದ್ದ ಅಂಬೇಡ್ಕರ್‌ರವರ ಜೀವನಶೈಲಿ, ಹೋರಾಟದ ಕುರಿತು ಸವಿಸ್ತಾರವಾಗಿ ವಿವರಿಸಿದರು.
ಎಸ್‌ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಪುತ್ತೂರು, ಜಿಲ್ಲಾ ಕಾರ್ಯದರ್ಶಿ ನವಾಝ್ ಶರೀಫ್ ಕಟ್ಟೆ, ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ದಲಿತ ಮುಖಂಡ, ಎಸ್‌ಡಿಪಿಐ ಜಿಲ್ಲಾ ಸಮಿತಿ ಸದಸ್ಯರಾದ ಆನಂದ ಮಿತ್ತಬೈಲ್, ಪುತ್ತೂರು ವಿಧಾನಸಭಾ ಕ್ಷೇತ್ರ ಉಪಾಧ್ಯಕ್ಷರಾದ ಹಮೀದ್ ಸಾಲ್ಮರ, ಸುಳ್ಯ ವಿಧಾನಸಭಾ ಉಪಾಧ್ಯಕ್ಷರಾದ ವಿಕ್ಟರ್ ಮಾರ್ಟಿಸ್, ಸವಣೂರು ಗ್ರಾಮ ಪಂಚಾಯತ್ ಸದಸ್ಯರಾದ ರಫೀಕ್ ಎಂ ಎ ಸಾಮಾಜಿಕ ನ್ಯಾಯ ದಿನಾಚರಣೆಯ ಬಗ್ಗೆ ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್ ಡಿಪಿಐ ಮಂಗಳೂರು ಗ್ರಾಮಾಂತರ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ತಲಪಾಡಿ, ಎಸ್ ಡಿಪಿಐ ಸುಳ್ಯ ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಮಿರಾಝ್ ಸುಳ್ಯ, ಸವಣೂರು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಚೆನ್ನು, ಎಸ್ ಡಿಪಿಐ ಸುಳ್ಯ ಬ್ಲಾಕ್ ಸಮಿತಿಯ ಅಧ್ಯಕ್ಷರಾದ ಸಿದ್ದೀಕ್ ಸಿ.ಎ, ದಲಿತ ಮುಖಂಡರಾದ ಗಣೇಶ್ ಗುರಿಯಾನ, ಎಲ್ ಐಸಿ ಪ್ರತಿನಿಧಿ ಶೇಖರ ಸವಣೂರು, ಎಸ್ ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯರು ಹಾಗೂ ದಲಿತ ಮುಖಂಡರಾದ ವಿಶ್ವನಾಥ ಪುಂಚತ್ತಾರು, ಸವಣೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಶ್ರೀಮತಿ ಮೀನಾಕ್ಷಿ, ಸಜಿಪ ನಡು ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಸುಶೀಲ ಆನಂದ ಉಪಸ್ಥಿತರಿದ್ದರು.ಪಕ್ಷದ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದೀಕ್ ಅಲೆಕ್ಕಾಡಿ ಸ್ವಾಗತಿಸಿದರು.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…