ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಸ್ನೇಹಿತೆಯರಿಗಿಂತ ಕಡಿಮೆ ಅಂಕ ಪಡೆದಿದ್ದಕ್ಕೆ ವಿದ್ಯಾರ್ಥಿನಿಯೋರ್ವಳು ನೊಂದು ಹಳ್ಳದ ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಘಟಗಿ ತಾಲೂಕಿನ ಬೆಲವಂತರ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕೀರ್ತಿ ಅಂಗಡಿ (17) ಮೃತ ವಿದ್ಯಾರ್ಥಿನಿ. ಕೀರ್ತಿ ಪಿಯುಸಿಯಲ್ಲಿ ಶೇ.66 ಅಂಕಗಳಿಸಿ ತೇರ್ಗಡೆಯಾಗಿದ್ದಾಳೆ. ಆದರೂ ಸ್ನೇಹಿತರಿಗಿಂತ ಕಡಿಮೆ ಅಂಕ ಬಂದಿದೆ ಎಂದು ನೊಂದು ಗ್ರಾಮದ ಜಮೀನಿನ ಪಕ್ಕದಲ್ಲಿರುವ ಬೇಡ್ತಿ ಹಳ್ಳದ ನೀರಿನಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ವರದಿಯಾಗಿದೆ.



