ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..! ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…! ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು. ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…! ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು. ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!
Advertisement

ವಿದ್ಯುತ್ ತಂತಿ ಸ್ಪರ್ಶ; ರಸ್ತೆ ಬದಿಯ ಮರಕ್ಕೆ ಬೆಂಕಿ, ತಪ್ಪಿದ ಅನಾಹುತ

ಮೂಡಿಗೆರೆ: ವಿದ್ಯುತ್ ತಂತಿಯೊಂದು ರಸ್ತೆ ಬದಿ ಒಣಗಿ ನಿಂತಿದ್ದ ಮರಕ್ಕೆ ತಗುಲಿ ಬೆಂಕಿ ಹತ್ತಿ ಉರಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗಬ್ಗಲ್ ಸಮೀಪದ ಹಾದಿ ಓಣಿ ಗ್ರಾಮದಲ್ಲಿ ನಡೆದಿದೆ. ರಾಜ್ಯ ಹೆದ್ದಾರಿಯಾದ ಈ ಮಾರ್ಗವಾಗಿ ಮೂಡಿಗೆರೆಯಿಂದ ಕೊಟ್ಟಿಗೆಹಾರ ಮುಖಾಂತರ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲ ಹಾಗೂ ಕಳಸಕ್ಕೆ ಹೋಗುವ ಸಾವಿರಾರು ವಾಹನಗಳು ನಿತ್ಯ ಓಡಾಡುತ್ತವೆ. ಅದೃಷ್ಟವಶಾತ್ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ನವೀನ್ ಎಂಬವರು ಮರ ಹೊತ್ತಿ ಉರಿಯುವುದನ್ನು ಕಂಡು ಕೂಡಲೇ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದು ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದಾರೆ.
ದೊಡ್ಡದಾಗಿ ಸಂಭವಿಸಬಹುದಾಗಿದ್ದ ಈ ಅನಾಹುತ ಕ್ಷಣಾರ್ಧದಲ್ಲಿ ತಪ್ಪಿದೆ. ಅಕಸ್ಮಾತ್, ಮರ ಹೊತ್ತಿ ಉರಿದ ಬಳಿಕ ಮುರಿದು ವಿದ್ಯುತ್ ತಂತಿಯ ಮೇಲೆ ಬಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು. ತುಂಡಾದ ವಿದ್ಯುತ್ ತಂತಿ ರಸ್ತೆಯಲ್ಲಿ ಸಂಚರಿಸುವ ಯಾವುದಾದರೂ ವಾಹನದ ಮೇಲೆ ಬಿದ್ದಿದ್ದರೆ ವಾಹನ ಕೂಡ ವಿದ್ಯುತ್ ತಂತಿಯಿಂದ ಹೊತ್ತಿ ಉರಿಯುವ ಸಾಧ್ಯತೆ ಇತ್ತು. ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿಗಳು ಭೇಟಿ ನೀಡಿ ವಿದ್ಯುತ್ ತಂತಿಗೆ ಅಡ್ಡ ಇರುವ ಮರಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ.

Leave a Reply

Your email address will not be published. Required fields are marked *

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆ…!

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ ಆಗಮಿಸಿ ಚುನಾವಣಾ ಪ್ರಕ್ರಿಯೆಗಳ ಅವಲೋಕನ ನಡೆಸಿದರು.

ಸೂರಿಕುಮೇರು: ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಪಿಕಪ್ ವಾಹನ ಡಿ*ಕ್ಕಿ..!

ಉಡುಪಿ: ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕನ ಬಂಧನ…!

ಉಡುಪಿ: ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಾರು ಮತ್ತು ಟ್ರಕ್ ನಡುವೆ ಭೀಕರ ಅಪಘಾತ….!

ಪುಂಜಾಲಕಟ್ಟೆ: ಪುಂಜಾಲಕಟ್ಟೆಯ ಬಸವನಗುಡಿ ಎಂಬಲ್ಲಿ ಸ್ಕೂಟರ್‌ಗೆ ಕೆ.ಎಸ್ ಆರ್ ಟಿಸಿ ಬಸ್ ಡಿ*ಕ್ಕಿ….!

error: Content is protected !!