ಥಾಣೆ ಜಿಲ್ಲೆಯ ಭಿವಾಂಡಿ ಪ್ರದೇಶದಲ್ಲಿರುವ ಬರೋಡಿ ಗ್ರಾಮದಲ್ಲಿ ಸುಡುತ್ತಿರುವ ಕಸದ ರಾಶಿಯ ಬಳಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಆತಂಕಕಾರಿ ಘಟನೆಯೊಂದು ನಡೆದಿದೆ. ಸ್ಥಳೀಯ ನಿವಾಸಿಗಳು ವಾಕಿಂಗ್ ಮಾಡುವಾಗ ಕಸದ ರಾಶಿಯ ಬಳಿ ಮಗುವೊಂದು ಕಂಡಿದೆ. ಬಳಿಕ ಮಗು ಮೃತಪಟ್ಟಿದೆ ಎಂದು ನರ್ಪೋಲಿ ಪೊಲೀಸ್ ಠಾಣೆಯ ಅಧಿಕಾರಿಗಳು ದೃಢಪಡಿಸಿದ್ದಾರೆ.

ಅಧಿಕಾರಿಯ ಪ್ರಕಾರ, ಶವ ಪತ್ತೆಯಾದ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಪೊಲೀಸರ ಒಂದು ತಂಡವು ಸ್ಥಳಕ್ಕೆ ಕೂಡಲೆ ತಲುಪಿತು. ಆ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಯಿತು.
ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 94 ಅಡಿಯಲ್ಲಿ ಪೊಲೀಸರು ಗುರುತಿಸಲಾಗದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನಿಖೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.



