25 ವರ್ಷಗಳ ಹಿಂದೆ ಮಹಾರಾಷ್ಟ್ರದ ಜಲಗಾಂವ್ ರೈಲು ನಿಲ್ದಾಣದಲ್ಲಿ ಅಂಧ ಮಗುವೊಂದು ಕಸದ ಬುಟ್ಟಿಯಲ್ಲಿ ಪತ್ತೆಯಾಗಿತ್ತು. ನಂತರ ಪೊಲೀಸರು ಮಗುವನ್ನು ರಕ್ಷಿಸಿ ಸುಧಾರಣಾ ಗೃಹಕ್ಕೆ ಕರೆದ್ಯೊಯಿದಿದ್ದಾರೆ. ಈಗ ಇದೇ ಮಗು ಬೆಳೆದು ದೊಡ್ಡವಳಾಗಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು, ಸಮಾಜದಲ್ಲಿ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಇವರಿಗೆ ನೇಮಕಾತಿ ಪತ್ರವೂ ಸಿಕ್ಕಿದೆ.
ಆ ಯುವತಿಯ ಹೆಸರೇ ಮಾಲಾ ಪಾಪಲ್ಕರ್. ಮಾಲಾ ನಾಗ್ಪುರ ಕಲೆಕ್ಟರೇಟ್‌ನಲ್ಲಿ ತನ್ನ ಮೊದಲ ಹುದ್ದೆಯನ್ನು ವಹಿಸಿಕೊಳ್ಳಲು ಸಜ್ಜಾಗಿದ್ದಾರೆ. ಕಳೆದ ವರ್ಷ ಮೇ ತಿಂಗಳಲ್ಲಿ ಮಹಾರಾಷ್ಟ್ರ ಸಾರ್ವಜನಿಕ ಸೇವಾ ಆಯೋಗದ ಕ್ಲರ್ಕ್-ಕಮ್-ಟೈಪಿಸ್ಟ್ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಮಾಲಾ ಪಾಪಲ್ಕರ್ ಸುದ್ದಿಯಾಗಿದ್ದರು. ಮೂರು ದಿನಗಳ ಹಿಂದೆ, 26 ವರ್ಷದ ಮಾಲಾ ಅವರಿಗೆ ನಾಗ್ಪುರ ಕಲೆಕ್ಟರೇಟ್‌ನಲ್ಲಿ ಕಂದಾಯ ಸಹಾಯಕಿಯಾಗಿ ನೇಮಕಗೊಂಡಿರುವ ಬಗ್ಗೆ ಮಾಹಿತಿ ನೀಡುವ ಪತ್ರ ಬಂದಿದೆ. ಔಪಚಾರಿಕತೆಗಳನ್ನು ಪೂರ್ಣಗೊಳಿಸಿದ ನಂತರ ಮುಂದಿನ 8-10 ದಿನಗಳಲ್ಲಿ ಮಾಲಾ ಕೆಲಸಕ್ಕೆ ವರದಿ ಮಾಡಿಕೊಳ್ಳುವ ಸಾಧ್ಯತೆಯಿದೆ.
ಮಾಲಾ ಹುಟ್ಟಿನಿಂದಲೇ ಕುರುಡಳಾಗಿದ್ದರೂ, ಅನಾಥಾಶ್ರಮದ ಬೆಂಬಲ ಮತ್ತು ದೃಷ್ಟಿಹೀನ ವಿದ್ಯಾರ್ಥಿಗಳಿಗೆ ವಿಶೇಷ ಶಿಕ್ಷಣದ ಪ್ರವೇಶದೊಂದಿಗೆ, ಅವರು ತಮ್ಮ ಅಧ್ಯಯನವನ್ನು ಮುಂದುವರೆಸಿದ್ದಾರೆ. ಮಾಲಾ ಅವರ ಹೋರಾಟದ ಕಥೆ ಮಹಾರಾಷ್ಟ್ರಕ್ಕೆ ಮಾತ್ರವಲ್ಲ, ಇಡೀ ದೇಶಕ್ಕೆ ಸ್ಫೂರ್ತಿಯಾಗಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…