ಮುಂಬೈನಲ್ಲಿ ಚಿನ್ನದ ಬೆಲೆ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 1 ಲಕ್ಷ ಸಮೀಪಕ್ಕೆ ಸಾಗುವ ಮೂಲಕ ಹೊಸ ದಾಖಲೆ ಬರೆದಿದೆ.
ಇತರೆ ದೇಶಗಳ ಮೇಲೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಸುಂಕ ವಿಧಿಸಿದ್ದೇ ಚಿನ್ನದ ಬೆಲೆ ದಾಖಲೆಯ ಏರಿಕೆಗೆ ಕಾರಣ ಎನ್ನಲಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಈಗ 98,350 ರೂ. ಯಾಗಿದ್ದು, 1 ಲಕ್ಷ ರೂ. ತಲುಪಲು ಕೇವಲ 1,650 ರೂ. ದೂರದಲ್ಲಿದೆ. 22 ಕ್ಯಾರೆಟ್ ಚಿನ್ನದ ಬೆಲೆ 90,150 ರೂ. ಆಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆ ಕಂಡಿದೆ. ಹೀಗಾಗಿ, ಸುರಕ್ಷಿತ ಹೂಡಿಕೆಗಾಗಿ ಹೂಡಿಕೆದಾರರು ಚಿನ್ನದತ್ತ ಆಕರ್ಷಿತರಾಗಿದ್ದಾರೆ. ಅಕ್ಷಯ ತೃತೀಯಕ್ಕೆ ಕೆಲವೇ ದಿನಗಳು ಬಾಕಿ ಇರುವ ಹೊತ್ತಲ್ಲೇ ಚಿನ್ನದ ಬೆಲೆ ಒಂದು ಲಕ್ಷ ಸನಿಹಕ್ಕೆ ತಲುಪಿರುವುದು ಆಭರಣ ಪ್ರಿಯರು ತಲೆ ಕೆಡಿಸುವಂತೆ ಮಾಡಿದೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…