ಜಮ್ಮು-ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಮೇಘಸ್ಫೋಟದ ಪರಿಣಾಮ ಭಾನುವಾರ ಸುರಿದ ಭಾರೀ ಮಳೆಯಿಂದ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಪರಿಣಾಮವಾಗಿ ಮೂವರು ಸಾವನ್ನಪ್ಪಿದ್ದು, 100ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ.
ಶನಿವಾರವೂ ಸಿಡಿಲು ಬಡಿದು ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದು, ಕಳೆದೆರಡು ದಿನದಲ್ಲಿ ಜಮ್ಮುವಿನಲ್ಲಿ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.
ಮೇಘಸ್ಫೋಟದೊಂದಿಗೆ ವೇಗವಾಗಿ ಬೀಸುವ ಗಾಳಿ, ಭೂಕುಸಿತ, ಆಲಿಕಲ್ಲು ಮಳೆಯೂ ಸಂಭವಿಸಿದ್ದು, ಧರಂ ಕುಂಡ್ ಗ್ರಾಮದಲ್ಲಿ 10 ಮನೆಗಳು ಸಂಪೂರ್ಣವಾಗಿ ಹಾನಿಗೊಳಗಾಗಿದೆ. 40ಕ್ಕೂ ಅಧಿಕ ಮನೆಗಳಿಗೆ ಭಾಗಶಃ ಹಾನಿಯಾಗಿದೆ. ಹಲವು ವಾಹನಗಳೂ ಕೊಚ್ಚಿಕೊಂಡು ಹೋಗಿವೆ. ಸುರಿಯುತ್ತಿದ್ದ ಧಾರಾಕಾರ ಮಳೆಯ ನಡುವೆಯೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದು, 100ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ.
ಜಮ್ಮು-ಶ್ರೀನಗರ ನಡುವಿನ 250 ಕಿ.ಮೀ ಉದ್ದದ ಸರ್ವಋತು ರಾಷ್ಟ್ರೀಯ ಹೆದ್ದಾರಿಯ ಬಳಿ ಹಲವು ಕಡೆಗಳಲ್ಲಿ ಭೂಕುಸಿತ ಸಂಭವಿಸಿದ್ದು, ಭಾರೀ ಬಂಡೆಗಳು ಉರುಳುತ್ತಿವೆ. ಆದಕಾರಣ, ಪರಿಸ್ಥಿತಿ ಸುಧಾರಿಸುವ ತನಕ ಆ ಮಾರ್ಗದಲ್ಲಿ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…