ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಶಾಸ್ತ್ರಿ ನಗರ ಪ್ರದೇಶದಲ್ಲಿ ಮಂಗಳವಾರ ಖಾಸಗಿ ತರಬೇತಿ ವಿಮಾನ ಅಪಘಾತಕ್ಕೀಡಾಗಿದ್ದು, ಪೈಲಟ್ ಸಾವಿಗೀಡಾಗಿದ್ದಾರೆ.
ಅನಿಕೇತ್ ಮಹಾಜನ್ ಮೃತ ಪೈಲಟ್ ಎಂದು ಗುರ್ತಿಸಲಾಗಿದ್ದು, ಖಾಸಗಿ ವಾಯುಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನ ಇಂದು ಮಧ್ಯಾಹ್ನ 12:30ರ ಸುಮಾರಿಗೆ ಶಾಸ್ತ್ರಿ ನಗರ ವಸತಿ ಪ್ರದೇಶದಲ್ಲಿ ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ತರಬೇತಿ ನಿರತ ಪೈಲಟ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಮ್ರೇಲಿ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಖಾರತ್ ತಿಳಿಸಿದ್ದಾರೆ.
ಅಮ್ರೇಲಿ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆಗಿತ್ತು. ಅನಿಕೇತ್ ಮಹಾಜನ್ ಒಬ್ಬರೇ ಏಕಾಂಗಿಯಾಗಿ ಹಾರಾಟ ನಡೆಸುತ್ತಿದ್ದರು. ವಿಮಾನ ತೆರೆದ ಪ್ರದೇಶಕ್ಕೆ ಅಪ್ಪಳಿಸುವ ಮೊದಲು ಮರದ ಮೇಲೆ ಬಿದ್ದಿದ್ದು, ಬೆಂಕಿ ಹೊತ್ತಿಕೊಂಡಿದೆ. ಅಪಘಾತದಲ್ಲಿ ಬೇರೆ ಯಾರಿಗೂ ಗಾಯಗಳಾಗಿಲ್ಲ ಎಂದು ಅವರು ಹೇಳಿದ್ದಾರೆ.
ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…