ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) 2024ರ ವಿವಿಧ ಕೇಂದ್ರ ಸೇವೆಗಳ ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಫಲಿತಾಂಶಗಳನ್ನು ಪ್ರಕಟಿಸಿದೆ.
2024ನೇ ಸಾಲಿನ ಫಲಿತಾಂಶದಲ್ಲಿ 1,009 ಅಭ್ಯರ್ಥಿಗಳು ಅರ್ಹತೆ ಪಡಿದ್ದಾರೆ. ಲಭ್ಯವಿರುವ ಮಾಹಿತಿ ಪ್ರಕಾರ 50ರ ಒಳಗೆ ಕರ್ನಾಟಕದ ಇಬ್ಬರು ವೈದ್ಯರು ಯಶಸ್ಸು ಸಾಧಿಸಿದ್ದಾರೆ. ಡಾ. ರಂಗ ಮಂಜು 24ನೇ ಮತ್ತು ಡಾ. ಸಚಿನ್ ಹರಿಹರ್ 41ನೇ ಸ್ಥಾನ ಪಡೆದಿದ್ದಾರೆ.
2024ರ ಕೇಂದ್ರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯು ಜೂನ್ 16ರಂದು ನಡೆದಿತ್ತು. 9,92,599 ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದರು. ಇವರಲ್ಲಿ 5,83,213 ಅಭ್ಯರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ 14,627 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಕಳೆದ ಸೆಪ್ಟೆಂಬರ್‌ನಲ್ಲಿ ಮುಖ್ಯ ಪರೀಕ್ಷೆ ನಡೆದಿತ್ತು. ಇವರಲ್ಲಿ 2,845 ಅಭ್ಯರ್ಥಿಗಳು ಸಂದರ್ಶನ ಹಂತಕ್ಕೆ ಆಯ್ಕೆಯಾಗಿದ್ದರು. ಐಎಎಸ್, ಐಎಫ್‌ಎಸ್, ಐಪಿಎಸ್ ಸೇರಿದಂತೆ ಕೇಂದ್ರ ಲೋಕಸೇವಾ ಆಯೋಗ ನಡೆಸುವ ಕೇಂದ್ರ ನಾಗರಿಕ ಸೇವಾ ಪರೀಕ್ಷೆಯ ವಿವಿಧ ಹುದ್ದೆಗಳಿಗೆ ಅಂತಿಮವಾಗಿ 1,009 ಅಭ್ಯರ್ಥಿಗಳು ಆಯ್ಕೆಯಾಗಿದ್ದರು. ಇವರಲ್ಲಿ 725 ಪುರುಷರು ಹಾಗೂ 284 ಮಹಿಳೆಯರು ಸೇರಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…