ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿ ಆದೇಶ ಹೊರಡಿಸಿದೆ.

ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಅಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣಗೆ ಹಿನ್ನಡೆಯಾಗಿದೆ.



