ಮಂಗಳೂರು ನಗರ ಹೊರವಲಯದ ಪಣಂಬೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದ ರಸ್ತೆ ಅಪಘಾತಕ್ಕೆ ಸ್ಕೂಟರ್ ಸವಾರರೊಬ್ಬರು ಬಲಿಯಾಗಿದ್ದಾರೆ. ಮೃತರನ್ನು ತೋಕೂರು ನಿವಾಸಿ ಟೈಟಸ್ ಫೆರಾವೊ (60) ಎಂದು ಗುರುತಿಸಲಾಗಿದೆ.

ಸ್ಕೂಟರ್ ಚಲಾಯಿಸಿಕೊಂಡು ಹೋಗುತ್ತಿದ್ದಾಗ ರಸ್ತೆಯ ಹೊಂಡಕ್ಕೆ ಬಿದ್ದಿದ್ದು, ಈ ಸಂದರ್ಭದಲ್ಲಿ ಸವಾರನೂ ರಸ್ತೆಗೆ ಬಿದ್ದಿದ್ದಾರೆ. ಇದೇ ವೇಳೆ ಹಿಂಬದಿಯಿಂದ ಬಂದ ಸರಕು ತುಂಬಿದ ಲಾರಿ ರಸ್ತೆಯಲ್ಲಿ ಬಿದ್ದಿದ್ದ ಸ್ಕೂಟರ್ ಮತ್ತು ಸವಾರನ ಮೇಲೆ ಚಲಿಸಿದೆ. ಇದರಿಂದ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್ ಮತ್ತು ಸವಾರ ಟೈಟಸ್ ಅವರನ್ನು ಲಾರಿ ಸುಮಾರು 100 ಅಡಿ ದೂರಕ್ಕೆ ಎಳೆದುಕೊಂಡು ಹೋಗಿದೆ. ಮಂಗಳೂರಿನ ಹೆದ್ದಾರಿಗಳಲ್ಲಿ ಇಂತಹ ಹೊಂಡಗಳು ತುಂಬಿದ್ದು ಸವಾರರು ಜೀವ ಕೈಯಲ್ಲಿ ಹಿಡಿದು ವಾಹನ ಚಲಾಯಿಸುವ ಪರಿಸ್ಥಿತಿ ಉಂಟಾಗಿದೆ.




