ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : ಉಗ್ರರ ದಾಳಿ ಪ್ರಕರಣ; ಮೃತರ ಕುಟುಂಬಕ್ಕೆ ತಲಾ ₹10 ಲಕ್ಷ ಪರಿಹಾರ ಘೋಷಿಸಿದ ಜಮ್ಮು ಸರ್ಕಾರ

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.

 

‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅದೇ ವೇಳೆ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ₹1 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.

‘ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.

Leave a Reply

Your email address will not be published. Required fields are marked *

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

ಉಡುಪಿ: ಉಡುಪಿಯಲ್ಲಿ ಅ.23ರಿಂದ ‘ನಡಿಗೆ’ ಸಾಮಾಜಿಕ ಅಭಿಯಾನ; ಬಡ ಮಕ್ಕಳಿಗೆ ಪಾದರಕ್ಷೆ ವಿತರಣೆ

ಮಂಗಳೂರು: ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಶ್ರಮದಾನ

ಉಡುಪಿ: ಉಡುಪಿಯಲ್ಲಿ ಬಿಸಿಲಿನ ಝಳ ಹೆಚ್ಚಳ; ನದಿಗಳ ನೀರಿನ ಮಟ್ಟ ಕುಸಿತ, ನೀರಿನ ಕೊರತೆಯ ಆತಂಕ..!

ನವದೆಹಲಿ, ಅ.2: ಗಾಂಧಿ ಜಯಂತಿ- ರಾಜಘಾಟ್‌ನಲ್ಲಿ ಗಾಂಧೀಜಿಗೆ ಪ್ರಧಾನಿ ಮೋದಿ ಪುಷ್ಪ ನಮನ

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

error: Content is protected !!