ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ₹10 ಲಕ್ಷ ಪರಿಹಾರವನ್ನು ಜಮ್ಮು ಮತ್ತು ಕಾಶ್ಮೀರದ ಸರ್ಕಾರ ಘೋಷಣೆ ಮಾಡಿದೆ. ಈ ಕುರಿತು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮಾಹಿತಿ ನೀಡಿದ್ದಾರೆ.
‘ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಿಂದ ತೀವ್ರ ಆಘಾತವಾಗಿದ್ದು ಹಾಗೂ ಅತೀವ ದುಃಖಿತನಾಗಿದ್ದೇನೆ. ಅಮಾಯಕ ನಾಗರಿಕರ ವಿರುದ್ಧದ ಇಂತಹ ಹೇಯ ಕೃತ್ಯಗಳಿಗೆ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ. ಈ ದಾಳಿಯನ್ನು ತೀವ್ರವಾಗಿ ಖಂಡಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಪ್ರಾಣ ಕಳೆದುಕೊಂಡವರಿಗಾಗಿ ನನ್ನ ಸಂತಾಪಗಳು’ ಎಂದು ಸಾಮಾಜಿಕ ಮಾಧ್ಯಮ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
ಅದೇ ವೇಳೆ ಭಯೋತ್ಪಾದಕ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ₹2 ಲಕ್ಷ ಹಾಗೂ ಸಣ್ಣಪುಟ್ಟ ಗಾಯವಾದವರಿಗೆ ₹1 ಲಕ್ಷ ಪರಿಹಾರವನ್ನು ಸಿಎಂ ಘೋಷಿಸಿದ್ದಾರೆ.
‘ಮೃತರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳುಹಿಸಲು ಬೇಕಾದ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗಿದೆ. ಗಾಯಾಳುಗಳಿಗೆ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸಲಾಗುತ್ತಿದೆ. ಕುಟುಂಬದ ದುಃಖದೊಂದಿಗೆ ನಾವು ಭಾಗಿಯಾಗುತ್ತೇವೆ. ಈ ಕಷ್ಟದ ಸಮಯದಲ್ಲಿ ನಾವು ನಿಮ್ಮೊಂದಿಗೆ ಇದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಮಂಗಳವಾರ ನಡೆಸಿದ ಗುಂಡಿನ ದಾಳಿಯಲ್ಲಿ 26 ಮಂದಿ ಮೃತಪಟ್ಟಿದ್ದರು. ಮೃತರಲ್ಲಿ ಇಬ್ಬರು ವಿದೇಶಿಯರು ಹಾಗೂ ಇಬ್ಬರು ಸ್ಥಳೀಯರು ಸೇರಿದ್ದಾರೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…