ಕಾಶ್ಮೀರದ ಉಗ್ರರ ದಾಳಿ ವಿಚಾರದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಲ್ಲುತ್ತೇವೆ, ರಾಜಕೀಯ ಮಾಡುವುದಿಲ್ಲ. ಕಾಶ್ಮೀರದಲ್ಲಿನ ಉಗ್ರರ ದಾಳಿ ಇಡೀ ಪ್ರಪಂಚಕ್ಕೆ ದೊಡ್ಡ ಆಘಾತ. ಈ ಭಯೋತ್ಪಾದಕ ದಾಳಿಯನ್ನು ನಾವು ಖಂಡಿಸುತ್ತೇವೆ. ಈ ಉಗ್ರರು ಹಾಗೂ ಭಯೋತ್ಪಾದಕ ಸಂಘಟನೆಗಳನ್ನು ಕಿತ್ತೊಗೆಯಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ನಾವು ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಗಂಭೀರವಾಗಿ ಮತ್ತು ಜಾಗೃತವಾಗಿ ಕೆಲಸ ಮಾಡಬೇಕಿದೆ. ಮುಖ್ಯಮಂತ್ರಿಗಳು ಈ ವಿಷಯ ತಿಳಿದ ತಕ್ಷಣವೇ ರಾಜ್ಯ ಸರ್ಕಾರದ ವತಿಯಿಂದ ಸಚಿವ ಸಂತೋಷ ಲಾಡ್ ಅವರ ಮುಂದಾಳತ್ವದಲ್ಲಿ ಒಂದು ತಂಡವನ್ನು ಕಳುಹಿಸಿದ್ದಾರೆ ಎಂದರು.
ಧರ್ಮದ ಹೆಸರಿನಲ್ಲಿ ಭಯೋತ್ಪಾದಕ ದಾಳಿ ನಡೆದಿರುವುದು ನಿಜಕ್ಕೂ ಖಂಡನೀಯ. ಕಾಂಗ್ರೆಸ್ ಪಕ್ಷ ಇದನ್ನು ಖಂಡಿಸುತ್ತದೆ. ಈ ವಿಚಾರದಲ್ಲಿ ನಮ್ಮ ಪಕ್ಷ ಕೇಂದ್ರ ಸರ್ಕಾರದ ಪರ ನಿಲ್ಲುವುದಾಗಿ ತಿಳಿಸಿದೆ. ಕೇಂದ್ರ ಸರ್ಕಾರ ಈ ಭಯೋತ್ಪಾದಕರನ್ನು ಸದೆಬಡಿಯಬೇಕು. ಇಂತಹ ಭಯೋತ್ಪಾದಕ ಸಂಘಟನೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಇಂತಹ ಸಂಘಟನೆಗಳು ಯಾವುದೇ ದೇಶಕ್ಕೆ ಸಂಬಂಧಿಸಿದರೂ ಇವುಗಳನ್ನು ಬುಡಸಮೇತ ಕಿತ್ತೊಗೆಯಬೇಕು. ಕಾಶ್ಮೀರದಲ್ಲಿ ಶಾಂತಿ ನೆಲೆಸುವಂತೆ ಮಾಡಬೇಕು ಎಂದರು.
ಈ ಘಟನೆ ವಿದೇಶಾಂಗ ನೀತಿ, ಪ್ರವಾಸಿಗರು ಹಾಗೂ ದೇಶದ ಜನರ ಮೇಲೆ ಪ್ರಭಾವ ಬೀರುವುದರಿಂದ ಕೇಂದ್ರ ಸರ್ಕಾರ ಈ ವಿಚಾರವಾಗಿ ಸರ್ವಪಕ್ಷ ಸಭೆ ಕರೆಯಬೇಕು. ನಾನು ಈಗಷ್ಟೇ ದಾಳಿಯಲ್ಲಿ ಮೃತರ ಕುಟುಂಬದವರ ಜೊತೆ ಚರ್ಚೆ ಮಾಡಿದೆ. ಶಿವಮೊಗ್ಗ ಜಿಲ್ಲಾ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಮೃತರ ಕುಟುಂಬಸ್ಥರನ್ನು ಭೇಟಿ ಮಾಡುವಂತೆ ತಿಳಿಸಿದ್ದೇನೆ ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬದವರಿಗೆ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆಂದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಸಾಧನೆ ಮಾಡಿ ದೇಶಕ್ಕೆ ಕೀರ್ತಿ ತಂದಿರುವ ಖ್ಯಾತ ಕ್ರೀಡಾಪಟು ಎಂ.ಆರ್. ಪೂವಮ್ಮ ಅವರನ್ನು ದಕ್ಷಿಣ…
ಖ್ಯಾತ ಸಾಹಿತಿ ಕೋಟ ಶಿವರಾಮ ಕಾರಂತರ ಜನ್ಮದಿನದ ಅಂಗವಾಗಿ ಕಲ್ಕೂರ ಪ್ರತಿಷ್ಠಾನದ ಕಾರಂತ ಪ್ರಶಸ್ತಿ ಸಮಿತಿ ನೀಡುವ 2026ನೇ ಸಾಲಿನ…
ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆಯೊಂದು ಡಿಕ್ಕಿಯಾಗಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಅನಿಲ ಸಮೀಪ ನಡೆದಿದೆ. ಹೆದ್ದಾರಿಯಲ್ಲಿ ಕಾರು ಸಂಚರಿಸುತ್ತಿದ್ದ…
ಅಂತಾರಾಷ್ಟ್ರೀಯ ಹಾಗೂ ವಿಶ್ವಮಟ್ಟದ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಕರ್ನಾಟಕದ ಕ್ರೀಡಾಪಟುಗಳಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹಧನ ತೀರಾ ಕಡಿಮೆಯಾಗಿದ್ದು, ಇತರ…
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…