ಮೂರು ವರ್ಷದ ಮಗುವಿನ ಮೇಲೆ ಮನೆ ಮಾಲೀಕನ ಮಗ ಸ್ನೇಹಿತನೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ನಲ್ಲಿ ನಡೆದಿದೆ. ಇಬ್ಬರೂ ಚಾಕೊಲೇಟ್ ಕೊಡಿಸುವುದಾಗಿ ನಂಬಿಸಿ ಕಾರಿನಲ್ಲಿ ಕರೆಸೊಯ್ದು ಅತ್ಯಾಚಾರವೆಸಗಿದ್ದಾರೆ. ಈ ಘಟನೆ ಗ್ವಾಲಿಯರ್‌ನ ದಾಬ್ರಾ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಕಾಲೋನಿಯಲ್ಲಿ ನಡೆದಿದೆ.
ಆರೋಪಿಗಳಲ್ಲಿ ಒಬ್ಬ ಮನೆ ಮಾಲೀಕನ ಮಗ, ಮಾಹಿತಿ ಪ್ರಕಾರ ಇಬ್ಬರು ಹುಡುಗರು ಬಾಲಕಿಗೆ ಚಾಕೊಲೇಟ್ ಕೊಟ್ಟು ಕಾರಿನಲ್ಲಿ ಕೂರಿಸಿ ಕೊರೆದೊಯ್ದಿದ್ದಾರೆ. ಕಾರಿನೊಳಗೆ ಅವರು ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ಆ ಮಗುವಿನ ಬಳಿ ಮನೆಯಲ್ಲಿ ಯಾರಿಗೂ ಏನೂ ಹೇಳಬೇಡ ಎಂದು ಹೇಳಿ ಮನೆಯ ಬಳಿ ಬಿಟ್ಟು ಹೋಗಿದ್ದಾರೆ. ಆದರೆ, ಹುಡುಗಿ ತನ್ನ ತಾಯಿಗೆ ನಡೆದ ಘಟನೆಯನ್ನೆಲ್ಲಾ ವಿವರಿಸಿದ್ದಾಳೆ. ನಂತರ ಆಕೆಯ ಪೋಷಕರು ನೇರವಾಗಿ ದಾಬ್ರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಇಬ್ಬರೂ ಆರೋಪಿಗಳನ್ನು ತ್ವರಿತವಾಗಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆಯ ಗಂಭೀರತೆಯನ್ನು ಪರಿಗಣಿಸಿ, ಎಸ್‌ಡಿಒಪಿ ದಬ್ರಾ ಜಿತೇಂದ್ರ ನಾಗೈಚ್, ಸಿಎಸ್‌ಪಿ ಕಿರಣ್ ಅಹಿರ್ವಾರ್ ಮತ್ತು ಮಹಿಳಾ ಪೊಲೀಸ್ ಠಾಣೆಯ ಉಸ್ತುವಾರಿ ಬಲ್ವಿಂದರ್ ಧಿಲ್ಲೋನ್ ಸ್ಥಳಕ್ಕೆ ಭೇಟಿ ನೀಡಿದ್ದು, ಪೋಕ್ಸೋ ಕಾಯ್ದೆ ಮತ್ತು ಅತ್ಯಾಚಾರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಎಎಸ್ಪಿ ನಿರಂಜನ್ ಶರ್ಮಾ ತಿಳಿಸಿದ್ದಾರೆ.
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಲು ಮತ್ತು ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ತಂಡಗಳನ್ನು ರಚಿಸಿ ವಿವಿಧ ಸ್ಥಳಗಳಿಗೆ ಕಳುಹಿಸಲಾಗಿದೆ ಎಂದು ವರದಿಯಾಗಿದೆ .
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…