ಜನ ಮನದ ನಾಡಿ ಮಿಡಿತ

Advertisement

ಶ್ರೀನಗರ : ಉಗ್ರರನ್ನು ಹುಡುಕಿ ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ

ಜಮ್ಮು ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯ ಪಹಲ್ಗಾಮ್ ನಲ್ಲಿ ಕ್ರೂರ ಕೃತ್ಯವೆಸಗಿದ ಉಗ್ರರ ಬೇಟೆಗೆ ಈಗಾಗಲೇ ಬಲೆ ಬೀಸಲಾಗಿದ್ದು, ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.

ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ:

ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : dpoanantnag-jk@nic.in ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!