ಜಮ್ಮು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಕ್ರೂರ ಕೃತ್ಯವೆಸಗಿದ ಉಗ್ರರ ಬೇಟೆಗೆ ಈಗಾಗಲೇ ಬಲೆ ಬೀಸಲಾಗಿದ್ದು, ಈ ದಾಳಿ ನಡೆಸಿದ ಶಂಕಿತ ಉಗ್ರರ ರೇಖಾಚಿತ್ರಗಳನ್ನು ಜಮ್ಮು ಕಾಶ್ಮೀರ ಪೊಲೀಸರು ಹಂಚಿಕೊಂಡಿದ್ದು, ಅವರ ಬಗ್ಗೆ ಸುಳಿವು ಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ ನೀಡುವುದಾಗಿ ಪೊಲೀಸರು ಘೋಷಿಸಿದ್ದಾರೆ.
ಸಾರ್ವಜನಿಕರಿಗೆ ಮನವಿ ಮಾಡಿರುವ ಪೊಲೀಸರು, ಮಾಹಿತಿದಾರರ, ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಯಾವುದೇ ಸಂಬಂಧಿತ ಮಾಹಿತಿಯನ್ನು ಹೊಂದಿರುವ ನಾಗರಿಕರು ಅನಂತ್‌ನಾಗ್‌ನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಪೊಲೀಸ್ ನಿಯಂತ್ರಣ ಕೊಠಡಿ ಅವರನ್ನು ನೇರವಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗಳಲ್ಲಿ ಸಂಪರ್ಕಿಸಲು ಕೋರಲಾಗಿದೆ:
ಎಸ್ಎಸ್ಪಿ ಅನಂತನಾಗ್ : 9596777666, ಪಿಸಿಆರ್ ಅನಂತನಾಗ್ : 9596777669 ಇ- ಮೇಲ್ : dpoanantnag-jk@nic.in ಮಾಹಿತಿ ನೀಡಬಹುದು. ಕಾಶ್ಮೀರ ಕಣಿವೆಯಲ್ಲಿ ಸಾರ್ವಜನಿಕರ ಸುರಕ್ಷತೆಗೆ ಯಾವುದೇ ಅಡಚಣೆ ಉಂಟಾಗದಂತೆ ತಡೆಯಲು ಕಾನೂನು ಜಾರಿ ಸಂಸ್ಥೆಗಳು ಪ್ರಯತ್ನಗಳನ್ನು ತೀವ್ರಗೊಳಿಸಿವೆ.
ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಸುಮಾರು ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು…
ಸೀತಾಂಗೋಳಿ–ಪೆರ್ಲ ರಸ್ತೆಯ ಪುತ್ತಿಗೆ ಮುಗುರೋಡ್‌ನಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಅವರ ಪತ್ನಿ…
ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ ಹಚ್ಚಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ಸುಳ್ಯ…
ಮನೆಯಲ್ಲಿ ಬಳಸಿ ಉಳಿದಿರುವ ಅಥವಾ ಬಳಕೆಯಾಗದೆ ಉತ್ತಮ ಸ್ಥಿತಿಯಲ್ಲಿರುವ ಪಾದರಕ್ಷೆಗಳನ್ನು ಬಡ ಹಾಗೂ ಪಾದರಕ್ಷೆರಹಿತ ಮಕ್ಕಳಿಗೆ ತಲುಪಿಸುವ ಉದ್ದೇಶದಿಂದ ‘ನಡಿಗೆ’…
‘ಸ್ವಚ್ಛತಾ ಹೀ ಸೇವಾ 2026’ ಕಾರ್ಯಕ್ರಮದ ಅಂಗವಾಗಿ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಅ.2ರಂದು ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ…
ಕರಾವಳಿಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದರ ಬೆನ್ನಲ್ಲೇ ಉಡುಪಿ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಜಲಾಶಯಗಳ ನೀರಿನ…