ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಮೃತರಾದ ಮಂಜುನಾಥ ರಾವ್ ಪಾರ್ಥಿವ ಶರೀರ ಶಿವಮೊಗ್ಗದ ತಮ್ಮ ಸ್ವ ಗ್ರಾಮಕ್ಕೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.
ಪಾರ್ಥಿವ ಶರೀರ ಶಿವಮೊಗ್ಗದ ಎಂ.ಆರ್.ಎಸ್.ವೃತ್ತಕ್ಕೆ ಬರುತ್ತಿದ್ದಂತೆಯೇ ಹಿಂದೂ ಸಂಘಟನೆಗಳ ಸಾವಿರಾರು ಕಾರ್ಯಕರ್ತರು ಬೈಕ್ ರ್‍ಯಾಲಿ ಮೂಲಕ ಬರಮಾಡಿಕೊಂಡರು. ಮೃತ ಮಂಜುನಾಥ ಮನೆಯ ಎದುರು ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.
‘ಭಾರತ ಮಾತೆಗೆ ಹೂ ಹಾಕಿ, ಪಾಕಿಸ್ತಾನಕ್ಕೆ ಬಾಂಬ್ ಹಾಕಿ’ ಎನ್ನುವ ಘೋಷಣೆ ಕೂಗುತ್ತಾ, ಜೆಸಿಬಿಯ ಮುಂಭಾಗ ಉಗ್ರರ ಪ್ರತಿಕೃತಿ ತೂಗುಹಾಕಿ ರ್‍ಯಾಲಿ ನಡೆಸಿ, ಪಾಕಿಸ್ತಾನ ವಿರುದ್ಧ ಆಕ್ರೋಶ ಹೊರಹಾಕಿದರು.
ಬಿ.ಎಚ್.ರಸ್ತೆಯ ಮೂಲಕ ಸಾಗಿದ ಆಂಬುಲೆನ್ಸ್ ಮೂಲಕ ಸಾಗಿ ಬೆಕ್ಕಿನಕಲ್ಮಠ, ಮೀನಾಕ್ಷಿ ಭವನ, ಅಮಿರ್ ಅಹ್ಮದ್ ವೃತ್ತ ಮೂಲಕ ಮುಖ್ಯ ಬಸ್ ನಿಲ್ದಾಣದಿಂದ ಸಾಗರ ರಸ್ತೆಯ ಸರ್ಕಿಟ್ ಹೌಸ್, ಆಯನೂರು ಗೇಟ್ ಮೂಲಕ ವಿಜಯ ನಗರ ಬಡಾವಣೆಯ ನೇತಾಜಿ ವೃತ್ತ ಸಮೀಪದ ಮನೆಗೆ ಪಾರ್ಥಿವ ಶರೀರ ತಲುಪಿತು. ದಾರಿ ಉದ್ದಕ್ಕೂ ಸಾವಿರಾರು ಜನರು ಸೇರಿದ್ದರು. ಮಂಜುನಾಥ ರಾವ್ ನಿಧನಕ್ಕೆ ಕಂಬನಿ ಮಿಡಿದರು. ನಗರದಾದ್ಯಂತ ಅಂಗಡಿ–ಮುಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಮುಚ್ಚಲಾಗಿತ್ತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…