ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸಕ್ಕೆ ದೇಶವೇ ಬೆಚ್ಚಿಬಿದ್ದಿದ್ದು, ಧರ್ಮದ ಆಧಾರದ ಮೇಲೆ ಹತ್ಯೆ ಮಾಡಿರುವುದು ಹಿಂದೂಗಳ ರಕ್ಷಣೆ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ. ಹೀಗಾಗಿ ಕೇಂದ್ರ ಸರ್ಕಾರದ ಪಿಎಂ ಪ್ಯಾಕೆಜ್ ಯೋಜನೆಯಡಿ ಕಾರ್ಯನಿರ್ವಹಿಸುವ ಹಿಂದೂ ಉದ್ಯೋಗಿಗಳಿಗೆ ಸುರಕ್ಷತೆ ದೃಷ್ಟಿಯಿಂದ ವರ್ಕ್ ಫ್ರಮ್ ಹೋಂ ಆದೇಶ ಹೊರಡಿಸಲಾಗಿದೆ.

ಕಾಶ್ಮೀರದ ಸದ್ಯದ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹಿಂದೂಗಳ ರಕ್ಷಣೆ ಅಗತ್ಯವಾಗಿದೆ. ಹೀಗಾಗಿ ಕಾಶ್ಮೀರದ ಬಾರಾಮುಲ್ಲಾ ಮತ್ತು ಅನಂತ್ ನಾಗ್ ಜಿಲ್ಲೆಗಳಲ್ಲಿ ಹಿಂದೂ ಉದ್ಯೋಗಿಗಳಿಗೆ ವರ್ಕ್ ಫ್ರಮ್ ಹೋಂ ಘೋಷಿಸಲಾಗಿದೆ.



