ಮಂಗಳೂರು ವಿಶ್ವವಿದ್ಯಾಲಯದಲ್ಲಿ ಮೊದಲ ಬಾರಿಗೆ ನಡೆದ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮದ ಅಂಗವಾಗಿ, CPR ಮತ್ತು ಪ್ರಥಮ ಚಿಕಿತ್ಸೆ ಕುರಿತಾಗಿ ವಿಶೇಷ ತರಬೇತಿ ಕಾರ್ಯಕ್ರಮವನ್ನು ಕಣಚೂರು ಮೆಡಿಕಲ್ ಸೈನ್ಸಸ್ ಇನ್ಸ್ಟಿಟ್ಯೂಟ್, ನಾಟೆಕಲ್, ಮಂಗಳೂರು ಸಹಯೋಗದಲ್ಲಿ ಆಯೋಜಿಸಲಾಯಿತು.
CPR ಕಾರ್ಡಿಯೋಪಲ್ಮನರಿ ರಿಸಸಿಟೇಷನ್ ಎಂದರೆ ಯಾರಾದರೊಬ್ಬರ ಹೃದಯ ಬಡಿತವು ನಿಂತಾಗ ತಕ್ಷಣವೇ ಮಾಡಬೇಕಾದ ತುರ್ತು ಚಿಕಿತ್ಸೆ ವಿಧಾನ. ಕಣಚೂರು ಮೆಡಿಕಲ್ ಸೈನ್ಸಸ್ ಸಂಸ್ಥೆ ಈ ರೀತಿಯ ಜೀವ ಉಳಿಸುವ ಕೌಶಲ್ಯಗಳ ಮಹತ್ವವನ್ನು ಎತ್ತಿ ಹಿಡಿಯುತ್ತದೆ.
ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿ ಡಾ. ಪಿ.ಎಲ್. ಧರ್ಮ ಅವರು ‘ಅಪಘಾತಗಳು ಎಲ್ಲೆಲ್ಲಿಯೂ ಸಂಭವಿಸಬಹುದು. ಆದರೆ ನಾವು ಮೂಲಭೂತ ಕೌಶಲ್ಯಗಳಲ್ಲಿ ತರಬೇತಿಯನ್ನು ಪಡೆದಿರಬೇಕು. ವಿದ್ಯಾರ್ಥಿಗಳು ಲಿಂಗ ಅಥವಾ ಧರ್ಮದ ಆಲೋಚನೆಯೆಲ್ಲವನ್ನೂ ಮರೆತು, ಹೆಚ್ಚಿನದಾಗಿ ಸಾಧನೆ ಮತ್ತು ಸಮಾಜ ಸೇವೆಯಲ್ಲಿ ತೊಡಗಬೇಕೆಂದು ಪ್ರೇರಣೆ ನೀಡಿದರು.
ಬಳಿಕ ಮಾತನಾಡಿದ ಇನ್ನೋರ್ವ ಉದ್ಘಾಟನಾಕಾರ ಡಾ. ಜಯರಾಜ್ ಅಮಿನ್ ಅವರು ಈ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡ ಕಣಚೂರು ಸಂಸ್ಥೆಗೆ ಧನ್ಯವಾದ ತಿಳಿಸಿ, ಪದವಿಧರರಿಗೆ ಸಮುದಾಯ ಆಧಾರಿತ ಅಗತ್ಯ ಕೌಶಲ್ಯ ಕಲಿಸುವ ಮಹತ್ವವನ್ನು ವಿವರಿಸಿದರು.
ಗಣ್ಯ ಅತಿಥಿಯಾಗಿ ಭಾಗವಹಿಸಿದ ಕಣಚೂರು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಮುಖ್ಯ ಆಡಳಿತಾಧಿಕಾರಿ ಡಾ. ರೋಹನ್ ಮೊನಿಸ್ ಅವರು ಜೀವ ರಕ್ಷಕ ಕೌಶಲ್ಯವನ್ನು ಕಲಿಸುವ ಮೂಲಕ ಮಂಗಳೂರು ವಿಶ್ವವಿದ್ಯಾಲಯದ ನೇತೃತ್ವ ತಂಡದ ಪ್ರಯತ್ನವನ್ನು ಶ್ಲಾಘಿಸಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವೈದ್ಯಕೀಯ ವಿಭಾಗದ ಡಾ. ಶ್ರೀನಿವಾಸ್ (JR III) ಮತ್ತು ಡಾ. ಉಬೇದುಲ್ಲಾ (JR I) ಅವರು ಸಿಪಿಆರ್ ಕೌಶಲ್ಯಗಳ ಪ್ರಾಯೋಗಿಕ ಪ್ರದರ್ಶನದೊಂದಿಗೆ ಮಾಹಿತಿ ಕಾರ್ಯಾಗಾರ ನಡೆಸಿದರು .
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…