ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ಅವರಿಗೆ ತಕ್ಕ ಶಾಸ್ತಿ ಮಾಡಿಯೇ ಸಿದ್ಧ ಎಂದು ಪ್ರಧಾನಿ ನರೇಂದ್ರ ಮೋದಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಉಗ್ರರ ದಾಳಿಯನ್ನು ನೆನೆದ ಪ್ರಧಾನಿ ಮೋದಿ, ನಿರೀಕ್ಷೆಯೇ ಮಾಡಿರದ ಸಾವು ಆ ಉಗ್ರರಿಗೆ ಬರಲಿದೆ ಎಂದು ಹೇಳಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಅವರು, ಕೇವಲ ಜನರ ಮೇಲೆ ಮಾಡಿದ ದಾಳಿ ಇದಲ್ಲ. ಈ ದಾಳಿ ಭಾರತ ಆತ್ಮದ ಮೇಲಾಗಿದೆ, ಯಾರು ಈ ದುಸ್ಸಾಹಸ ಮಾಡಿದ್ದಾರೋ, ಯಾರು ಈ ದಾಳಿಯ ಹಿಂದಿದ್ದಾರೋ, ಅವರಿ ಕಲ್ಪನೆಗೂ ಮೀರಿದ ಶಿಕ್ಷೆಯನ್ನು ಅವರಿಗೆ ಕೊಡುತ್ತೇವೆ ಎಂದು ಹೇಳಿದ್ದಾರೆ.
ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜೊತೆಗಿದ್ದಾರೆ. ಎಂದು ಉಗ್ರರ ವಿರುದ್ಧ ಗುಡುಗಿದ್ದಾರೆ.



