ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಇಂದು ಬೆಳಗ್ಗೆ ದಾಳಿಯಲ್ಲಿ ಹತರಾದ ಭರತ್ ರವರ ಅಂತಿಮ ದರ್ಶನ ಪಡೆದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಹತ್ಯೆಗೊಳಪಟ್ಟ ಮೂವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ಕೊಡುವುದಾಗಿ ತಿಳಿಸಿ, ಪೋಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು.



