ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಕಾಶ್ಮೀರ ಪಹಲ್ಗಾಮ್‌ ದುಷ್ಕೃತ್ಯ – ಬಿಷಪ್‌ ಖಂಡನೆ

ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್‌ ಅತಿ ವಂದನೀಯ ಡಾ.ಪೀಟರ್‌ ಪಾವ್ಲ್‌ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.

ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.

ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.

ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್‌ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!