ಭಾರತದ ಮುಕುಟಮಣಿ ಎನ್ನಿಸಿರುವ ಕಾಶ್ಮೀರದಲ್ಲಿ ಪ್ರವಾಸಕ್ಕಾಗಿ ತೆರಳಿದ್ದ ಅಮಾಯಕ ನಾಗರಿಕರನ್ನು ಹತ್ಯೆ ಮಾಡಿದ ಉಗ್ರಗಾಮಿಗಳ ಕೃತ್ಯ ಅತ್ಯಂತ ಖಂಡನೀಯ, ಯಾವುದೇ ತಪ್ಪೆಸಗದವರ ಮೇಲೆ ಏಕಾಏಕಿ ಗುಂಡಿಟ್ಟು ಕೊಂದಿರುವುದು ಮಾನವತೆಗೆ ಕಳಂಕ ಎಂದು ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಅತಿ ವಂದನೀಯ ಡಾ.ಪೀಟರ್ ಪಾವ್ಲ್ ಸಾಲ್ಡನ್ಹಾ ಅವರು ಖೇದ ವ್ಯಕ್ತಪಡಿಸಿದ್ದಾರೆ.
ರಜೆಯಲ್ಲಿ ಕುಟುಂಬಗಳು, ಮಹಿಳೆಯರು ಮಕ್ಕಳ ಸಹಿತ ಕಾಶ್ಮೀರ ಪಹಲ್ಗಾಮ್‌ಗೆ ಪ್ರವಾಸ ತೆರಳಿದ್ದರು. ಅಲ್ಲಿ ಮುಖ್ಯವಾಗಿ ಪುರುಷರನ್ನೇ ಗುರಿಯಾಗಿಸಿ ಉಗ್ರರು 26 ಮಂದಿಯ ತಲೆಗೇ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಇಂತಹ ಪಾಪಕೃತ್ಯ ಯಾವುದೇ ನಾಗರಿಕರು ಒಪ್ಪುವಂಥದ್ದಲ್ಲ.
ಜೀವ ಕಳೆದುಕೊಂಡವರಿಗೆ ಚಿರಶಾಂತಿ ಲಭಿಸಲಿ, ಗಾಯಗೊಂಡವರು ಬೇಗನೆ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ.
ಇದಕ್ಕೆ ಕಾರಣರಾದ ಯಾರನ್ನೂ ಬಿಡದೆ ಸರಕಾರ ಕ್ರಮ ಜರಗಿಸುವಂತೆ ಆಗ್ರಹಿಸುವುದಾಗಿ ಬಿಷಪ್ ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…