ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಬ್ರೇಕ್​ ಫೇಲ್​ ಆಗಿ ಹಳ್ಳಕ್ಕೆ ಉರುಳಿ ಬಿದ್ದ ಬಸ್: 25ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಬೆಂಗಳೂರಿನಿಂದ ಸಂಗಮ ನೋಡಲು ತೆರಳಿದ್ದ ಎರಡು ಖಾಸಗಿ ಬಸ್​ಗಳು ಅಪಘಾತಕ್ಕೀಡಾಗಿವೆ. ಮೊದಲ ಬಸ್​ ಬ್ರೇಕ್​ ಫೇಲ್​ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಇದರ ಹಿಂದೆ ಇದ್ದ ಮತ್ತೊಂದು ಬಸ್​ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಹಳ್ಳಕ್ಕೆ ಬಿದ್ದ ಬಸ್​ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.

ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.

ಕ್ರಿಶ್ಚಿಯನ್ನರ ಹಬ್ಬದ ಹಿನ್ನೆಲೆಯಲ್ಲಿ ಮೊದಲು ಬೆಟ್ಟದ ಹಲಸೂರು ಗ್ರಾಮಕ್ಕೆ ಬಂದಿದ್ದರು. ಹಬ್ಬದ ಊಟ ಮುಗಿಸಿಕೊಂಡು ಸಂಗಮ‌ ನೋಡಲು ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳು ಬೆಂಗಳೂರಿನ ಈಜಿಪುರ ನಿವಾಸಿಗಳು ಎಂದು ತಿಳಿದುಬಂದಿದೆ.

ಎರಡು ಬಸ್​ಗಳಲ್ಲಿ ಬೆಂಗಳೂರಿನಿಂದ ಬೆಟ್ಟದ ಹಲಸೂರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಬಳಿಕ ಸಂಗಮ ನೋಡಲು ತೆರಳುತ್ತಿದ್ದರು. ಈ ವೇಳೆ ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್​​ ಫೇಲ್​ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್​ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!