ಬೆಂಗಳೂರಿನಿಂದ ಸಂಗಮ ನೋಡಲು ತೆರಳಿದ್ದ ಎರಡು ಖಾಸಗಿ ಬಸ್ಗಳು ಅಪಘಾತಕ್ಕೀಡಾಗಿವೆ. ಮೊದಲ ಬಸ್ ಬ್ರೇಕ್ ಫೇಲ್ ಆಗಿ ನಿಯಂತ್ರಣ ಕಳೆದುಕೊಂಡು ರಸ್ತೆ ಪಕ್ಕದ ಹಳ್ಳಕ್ಕೆ ಬಿದ್ದಿದೆ. ಇದರ ಹಿಂದೆ ಇದ್ದ ಮತ್ತೊಂದು ಬಸ್ ರಸ್ತೆ ಪಕ್ಕದ ಮರಕ್ಕೆ ಡಿಕ್ಕಿ ಹೊಡೆದಿದೆ. ಹಳ್ಳಕ್ಕೆ ಬಿದ್ದ ಬಸ್ನಲ್ಲಿದ್ದ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಈ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದೆ.
ಸದ್ಯ ಗಾಯಾಳುಗಳಿಗೆ ಕನಕಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಕೆಲ ಗಾಯಾಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ರವಾನೆ ಮಾಡಲಾಗಿದೆ.
ಕ್ರಿಶ್ಚಿಯನ್ನರ ಹಬ್ಬದ ಹಿನ್ನೆಲೆಯಲ್ಲಿ ಮೊದಲು ಬೆಟ್ಟದ ಹಲಸೂರು ಗ್ರಾಮಕ್ಕೆ ಬಂದಿದ್ದರು. ಹಬ್ಬದ ಊಟ ಮುಗಿಸಿಕೊಂಡು ಸಂಗಮ ನೋಡಲು ತೆರಳುವ ವೇಳೆ ಈ ದುರಂತ ಸಂಭವಿಸಿದೆ. ಗಾಯಾಳುಗಳು ಬೆಂಗಳೂರಿನ ಈಜಿಪುರ ನಿವಾಸಿಗಳು ಎಂದು ತಿಳಿದುಬಂದಿದೆ.
ಎರಡು ಬಸ್ಗಳಲ್ಲಿ ಬೆಂಗಳೂರಿನಿಂದ ಬೆಟ್ಟದ ಹಲಸೂರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಬಳಿಕ ಸಂಗಮ ನೋಡಲು ತೆರಳುತ್ತಿದ್ದರು. ಈ ವೇಳೆ ಮೊದಲ ಬಸ್ ರಸ್ತೆ ತಿರುವಿನಲ್ಲಿ ಬ್ರೇಕ್ ಫೇಲ್ ಆಗಿ ಹಳಕ್ಕೆ ಬಿದ್ದಿದ್ದರೆ, ಇದರ ಹಿಂದೆ ಇದ್ದ ಮತ್ತೊಂದು ಬಸ್ ಕೂಡ ರಸ್ತೆ ತಿರುವಿನಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ.
ತಾಲೂಕಿನ ವಿವಿಧೆಡೆ ಚಿರತೆ ಓಡಾಟ ಕಂಡುಬಂದಿರುವ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಎರಡು ಕಡೆ ಬೋನು…
ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ ಮಾಡೂರು ಯೂಸುಫ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳಿಗೆ ಮಂಗಳೂರಿನ ಎರಡನೇ ಹೆಚ್ಚುವರಿ…
ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರ ನಡೆಸಲು ಸುಪಾರಿ ನೀಡಿದ ಆರೋಪದಲ್ಲಿ ಮಹಿಳೆಯೊಬ್ಬಳನ್ನು ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಕೇರಳದ…
ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಬಿಳಿ ಬಣ್ಣದ ಸ್ವೀಫ್ಟ್ ಡಿಸೈರ್ ಕಾರಿನಲ್ಲಿ ಹಿಂಸಾತ್ಮಕವಾಗಿ ಎಳೆದುಕೊಂಡು ಹೋದ…
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ಹಾಗೂ ಜನಜಾಗೃತಿ ವೇದಿಕೆ ಟ್ರಸ್ಟ್ ದಕ್ಷಿಣ ಕನ್ನಡ ಜಿಲ್ಲೆ ಇದರ…
ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧೀಜಿಯವರ 157ನೇ ಜನ್ಮದಿನದ ಅಂಗವಾಗಿ ಶುಕ್ರವಾರ ನಗರದ ರಾಜಾಜಿ…