ಜನ ಮನದ ನಾಡಿ ಮಿಡಿತ

Advertisement

ಮೂಡುಬಿದಿರೆ: ಆಳ್ವಾಸ್ ನಲ್ಲಿ ಏಪ್ರಿಲ್ 27 ರಂದು ಭ। ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.),ಮೂಡುಬಿದಿರೆ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ ಇದೇ ಬರುವ ಏಪ್ರಿಲ್ 27 ರ ಭಾನುವಾರ ಅಪರಾಹ್ನ 4 ಗಂಟೆಯಿoದ ಪರಮಪೂಜ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭ। ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

 

ಈ ಕಾರ್ಯಕ್ರಮದಲ್ಲಿ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಮೂಡುಬಿದಿರೆಯ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯಾ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಸಂಜೆ 4 ರಿಂದ 5ವರೆಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ಕಾರ್ಯಕ್ರಮ ನಂತರ ಸಂಜೆ 5ರಿಂದ ಭ।ಶ್ರೀ ಮಹಾವೀರ ಸ್ವಾಮಿ ಜಿನಬಿಂಬ ಮೆರವಣಿಗೆ, ಸಂಜೆ 5.15ರಿಂದ ತೋರಣ ಮುಹೂರ್ತ ಕಾರ್ಯಕ್ರಮ ಮತ್ತು ಸಂಜೆ 5.30ಕ್ಕೆ ಸರಿಯಾಗಿ ಜಯಶ್ರೀ ಡಿ. ಜೈನ್ ಹೊರನಾಡು ಅವರಿಂದ ಜಿನ ಗಾನಾಮೃತ ಜರುಗಲಿದೆ. ನಂತರ ಸಂಜೆ 5.45ರಿಂದ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30ಕ್ಕೆ ಸರಿಯಾಗಿ ಭ| ಶ್ರೀ ಮಹಾವೀರ ಸ್ವಾಮಿ ಜಿನ ಬಿಂಬಕ್ಕೆ ಮಂಗಳದ್ರವ್ಯಾಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆ ನೆರವೇರಲಿದೆ. ಸಂಜೆ 8 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರಕುಮಾರ್, ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್.ರಾಜೇoದ್ರ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಾವೀರ ಜಯಂತಿಯ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಗಳ ವಿಜೇತರಿಗೆ ಕಾರ‍್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಉಮಾನಾಥ ಕೋಟ್ಯಾನ್, ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಸಮಾಜಭಾಂದವರು ಹಾಗೂ ಸರ್ವರಿಗೂ ಸ್ವಾಗತ ಕೋರಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ್ ಎಂ, ಧನಕೀರ್ತಿ ಬಲಿಪ, ಆದಿರಾಜ್ ಜೈನ್, ವಕೀಲೆ ಶ್ವೇತಾ ಜೈನ್ ಮೊದಲಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

error: Content is protected !!