ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ(ರಿ.),ಮೂಡುಬಿದಿರೆ ಹಾಗೂ ಕರಾವಳಿ ಮತ್ತು ಮಲೆನಾಡಿನ ಸಮಸ್ತ ಜೈನ ಸಮಾಜ ಬಾಂಧವರ ಸಹಕಾರದೊಂದಿಗೆ ಕೃಷಿಸಿರಿ ವೇದಿಕೆಯಲ್ಲಿ ಇದೇ ಬರುವ ಏಪ್ರಿಲ್ 27 ರ ಭಾನುವಾರ ಅಪರಾಹ್ನ 4 ಗಂಟೆಯಿoದ ಪರಮಪೂಜ್ಯ ಡಾ ಡಿ.ವೀರೇಂದ್ರ ಹೆಗ್ಗಡೆ ಮತ್ತು ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಭ। ಶ್ರೀ ಮಹಾವೀರ ಸ್ವಾಮಿ ಜನ್ಮಕಲ್ಯಾಣ ಮಹೋತ್ಸವ ಆಚರಣೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಜನ್ಮ ಕಲ್ಯಾಣ ಮಹೋತ್ಸವದಲ್ಲಿ ಮೂಡುಬಿದಿರೆಯ ಶ್ರೀ ಜೈನ ಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯಾ ಮಹಾಸ್ವಾಮಿಯವರು ಆಶೀರ್ವಚನ ನೀಡಲಿದ್ದಾರೆ. ಸಂಜೆ 4 ರಿಂದ 5ವರೆಗೆ ಆಳ್ವಾಸ್ ವಿದ್ಯಾರ್ಥಿಗಳಿಂದ ಜಿನಭಜನೆ ಕಾರ್ಯಕ್ರಮ ನಂತರ ಸಂಜೆ 5ರಿಂದ ಭ।ಶ್ರೀ ಮಹಾವೀರ ಸ್ವಾಮಿ ಜಿನಬಿಂಬ ಮೆರವಣಿಗೆ, ಸಂಜೆ 5.15ರಿಂದ ತೋರಣ ಮುಹೂರ್ತ ಕಾರ್ಯಕ್ರಮ ಮತ್ತು ಸಂಜೆ 5.30ಕ್ಕೆ ಸರಿಯಾಗಿ ಜಯಶ್ರೀ ಡಿ. ಜೈನ್ ಹೊರನಾಡು ಅವರಿಂದ ಜಿನ ಗಾನಾಮೃತ ಜರುಗಲಿದೆ. ನಂತರ ಸಂಜೆ 5.45ರಿಂದ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಸಂಜೆ 6.30ಕ್ಕೆ ಸರಿಯಾಗಿ ಭ| ಶ್ರೀ ಮಹಾವೀರ ಸ್ವಾಮಿ ಜಿನ ಬಿಂಬಕ್ಕೆ ಮಂಗಳದ್ರವ್ಯಾಭಿಷೇಕ ಮತ್ತು ಅಷ್ಟವಿಧಾರ್ಚನೆ ಪೂಜೆ ನೆರವೇರಲಿದೆ. ಸಂಜೆ 8 ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರಕುಮಾರ್, ಎಸ್.ಸಿ.ಡಿ.ಸಿ.ಸಿ.ಬ್ಯಾಂಕ್‌ನ ಅಧ್ಯಕ್ಷ ಎಂ.ಎನ್.ರಾಜೇoದ್ರ ಕುಮಾರ್ ಅವರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮಹಾವೀರ ಜಯಂತಿಯ ಪೂರ್ವಭಾವಿಯಾಗಿ ನಡೆದ ಸ್ಪರ್ಧೆಗಳ ವಿಜೇತರಿಗೆ ಕಾರ‍್ಯಕ್ರಮದಲ್ಲಿ ಬಹುಮಾನವನ್ನು ವಿತರಿಸಲಾಗುವುದು. ಮೂಲ್ಕಿ-ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಎ. ಉಮಾನಾಥ ಕೋಟ್ಯಾನ್, ಕರ್ನಾಟಕ ಸರಕಾರದ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ ಅಧ್ಯಕ್ಷ ಡಾ.ಎಂ. ಮೋಹನ್ ಆಳ್ವ ಕರಾವಳಿ ಹಾಗೂ ಮಲೆನಾಡಿನ ಸಮಸ್ತ ಜೈನ ಸಮಾಜಭಾಂದವರು ಹಾಗೂ ಸರ್ವರಿಗೂ ಸ್ವಾಗತ ಕೋರಿದ್ದಾರೆ. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್, ಚೌಟರ ಅರಮನೆಯ ಕುಲದೀಪ್ ಎಂ, ಧನಕೀರ್ತಿ ಬಲಿಪ, ಆದಿರಾಜ್ ಜೈನ್, ವಕೀಲೆ ಶ್ವೇತಾ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…