ಜನ ಮನದ ನಾಡಿ ಮಿಡಿತ

Advertisement

ಮಂಗಳೂರಿನಲ್ಲಿ 24ನೇ ಕರ್ನಾಟಕ ರಾಜ್ಯ ವುಶು ಚಾಂಪಿಯನ್‌ಶಿಪ್

24ನೇ ಕರ್ನಾಟಕ ರಾಜ್ಯ ವುಶು ಚಾಂಪಿಯನ್‌ಶಿಪ್ ದಿನಾಂಕ 27 ರಿಂದ 30 ಏಪ್ರಿಲ್ 2025 ರ ವರೆಗೆ ಮಂಗಳೂರಿನ ಯು ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಭಾರತೀಯ ವುಶು ಸಂಸ್ಥೆಯ ಜಂಟಿ ಕಾರ್ಯದರ್ಶಿ ಅಶೋಕ್ ಮುಕಾಶಿ ತಿಳಿಸಿದರು.

ಈ ಚಾಂಪಿಯನ್‌ಶಿಪ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಕರ್ನಾಟಕ ವುಶು ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆಯಾಗುತ್ತಿದೆ. ಕ್ರೀಡಾಕೂಟದಲ್ಲಿ ಭಾಗಿಯಾಗಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ 600 ವುಶು ಕ್ರೀಡಾಪಟುಗಳು, ತರಬೇತಿದಾರರು ಹಾಗೂ ನಿರ್ಣಾಯಕರುಗಳು ಭಾಗಿಯಗಲಿದ್ದಾರೆ.

ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಪದಕಗಳನ್ನು ನೀಡಿ ಗೌರವಿಸಲಾಗುವುದು, ಹೆಚ್ಚಿನ ಪದಕಗಳನ್ನು ಪಡೆದ ಜಿಲ್ಲಾ ವುಶು ತಂಡಗಳಿಗೆ ಚಾಂಪಿಯನ್ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಭಾಗಿಯಾದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಈ ಕ್ರೀಡಾಕೂಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಮುಂಬರುವ ರಾಷ್ಟ್ರೀಯ ಸಬ್ ಜೂನಿಯರ್ , ಜೂನಿಯರ್ ಹಾಗೂ ಸೀನಿಯರ್ ವುಶು ಕ್ರೀಡಾಕೂಟದಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ವುಶು ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದರು .

ಇನ್ನು ಈ ಕ್ರೀಡಾಕೂಟದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ , ಸಂಸದ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ ಸೋಜಾ, ಮಂಗಳೂರು ಉತ್ತರ ಶಾಸಕ ಭಾರತ್ ಶೆಟ್ಟಿ ಹಾಗೂ ಮತ್ತಿತರರು ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

.
ಈ ಪತ್ರಿಕಾ ಗೋಷ್ಠಿಯಲ್ಲಿ ಭಾರತೀಯ ವುಶು ಸಂಸ್ಥೆಯ ಜಂಟಿ ಕಾರ್ಯದರ್ಶಿ ಅಶೋಕ್ ಮುಕಾಶಿ, ಕರ್ನಾಟಕ ವುಶು ಸಂಘದ ಖಜಾಂಜಿ ಸಂಗಮೇಶ್ ಆರ್. ಐ. ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!