24ನೇ ಕರ್ನಾಟಕ ರಾಜ್ಯ ವುಶು ಚಾಂಪಿಯನ್‌ಶಿಪ್ ದಿನಾಂಕ 27 ರಿಂದ 30 ಏಪ್ರಿಲ್ 2025 ರ ವರೆಗೆ ಮಂಗಳೂರಿನ ಯು ಎಸ್ ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಆಯೋಜಿಸಲಾದ ಪತ್ರಿಕಾ ಗೋಷ್ಠಿಯಲ್ಲಿ ಭಾರತೀಯ ವುಶು ಸಂಸ್ಥೆಯ ಜಂಟಿ ಕಾರ್ಯದರ್ಶಿ ಅಶೋಕ್ ಮುಕಾಶಿ ತಿಳಿಸಿದರು.
ಈ ಚಾಂಪಿಯನ್‌ಶಿಪ್ ದಕ್ಷಿಣ ಕನ್ನಡ ಜಿಲ್ಲಾ ಘಟಕ ಕರ್ನಾಟಕ ವುಶು ಸಂಸ್ಥೆಯ ಸಹಯೋಗದೊಂದಿಗೆ ಆಯೋಜನೆಯಾಗುತ್ತಿದೆ. ಕ್ರೀಡಾಕೂಟದಲ್ಲಿ ಭಾಗಿಯಾಗಲು ರಾಜ್ಯದ ಎಲ್ಲಾ ಜಿಲ್ಲೆಗಳಿಂದ 600 ವುಶು ಕ್ರೀಡಾಪಟುಗಳು, ತರಬೇತಿದಾರರು ಹಾಗೂ ನಿರ್ಣಾಯಕರುಗಳು ಭಾಗಿಯಗಲಿದ್ದಾರೆ.
ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಪ್ರಶಸ್ತಿ ಪತ್ರ ಹಾಗೂ ಪ್ರಶಸ್ತಿ ಪದಕಗಳನ್ನು ನೀಡಿ ಗೌರವಿಸಲಾಗುವುದು, ಹೆಚ್ಚಿನ ಪದಕಗಳನ್ನು ಪಡೆದ ಜಿಲ್ಲಾ ವುಶು ತಂಡಗಳಿಗೆ ಚಾಂಪಿಯನ್ ಟ್ರೋಫಿ ನೀಡಿ ಗೌರವಿಸಲಾಗುತ್ತದೆ. ಭಾಗಿಯಾದ ಎಲ್ಲರಿಗೂ ಪ್ರಮಾಣ ಪತ್ರ ನೀಡಲಾಗುವುದು ಈ ಕ್ರೀಡಾಕೂಟಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಮುಂಬರುವ ರಾಷ್ಟ್ರೀಯ ಸಬ್ ಜೂನಿಯರ್ , ಜೂನಿಯರ್ ಹಾಗೂ ಸೀನಿಯರ್ ವುಶು ಕ್ರೀಡಾಕೂಟದಲ್ಲಿ ಭಾಗಿಯಾಗಲು ಕರ್ನಾಟಕ ರಾಜ್ಯ ವುಶು ತಂಡಕ್ಕೆ ಆಯ್ಕೆ ಮಾಡಲಾಗುತ್ತದೆ ಎಂದರು .
ಇನ್ನು ಈ ಕ್ರೀಡಾಕೂಟದ ಉದ್ಘಾಟನೆ ಹಾಗೂ ಸಮಾರೋಪ ಸಮಾರಂಭದಲ್ಲಿ ರಾಜ್ಯ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ , ಸಂಸದ ಬ್ರಿಜೇಶ್ ಚೌಟ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ ಸೋಜಾ, ಮಂಗಳೂರು ಉತ್ತರ ಶಾಸಕ ಭಾರತ್ ಶೆಟ್ಟಿ ಹಾಗೂ ಮತ್ತಿತರರು ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ.
.
ಈ ಪತ್ರಿಕಾ ಗೋಷ್ಠಿಯಲ್ಲಿ ಭಾರತೀಯ ವುಶು ಸಂಸ್ಥೆಯ ಜಂಟಿ ಕಾರ್ಯದರ್ಶಿ ಅಶೋಕ್ ಮುಕಾಶಿ, ಕರ್ನಾಟಕ ವುಶು ಸಂಘದ ಖಜಾಂಜಿ ಸಂಗಮೇಶ್ ಆರ್. ಐ. ಮತ್ತಿತರರು ಉಪಸ್ಥಿತರಿದ್ದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್‌ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…