ರಾಷ್ಟ್ರೀಯ ಓಪನ್/ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ 6 ರ ವರೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ನಡೆಯಲಿದೆ ಎಂದು ದ. ಕ. ಜಿಲ್ಲಾ ಚೆಸ್ ಅಸೋಸಿಯೇಷನ್ ಮಂಗಳೂರು ಇದರ ಅಧ್ಯಕ್ಷರಾದ ರಮೇಶ್ ಕೋಟೆ ತಿಳಿಸಿದರು.
ಮಂಗಳೂರಿನ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಘೋಕೇಶ್ ವಿಶ್ವ ಚಾಂಪಿಯನ್ ಆಗಿ ಹೊರ ಹೊಮ್ಮಿದ ನಂತರ ಚೆಸ್ಸಿನ ನವ ಯುಗ ಶುರುವಾಗಿದೆ. ಇದು ಮಂಗಳೂರಿಗೂ ಪ್ರಭಾವ ಬೀರಿದ್ದು, ನಗರದಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಚೆಸ್ ನಲ್ಲಿ ಪಾಲ್ಗೊಳ್ಳಲು ಮುಂದಾಗಿದ್ದಾರೆ. ಮಕ್ಕಳಲ್ಲಿ ಬುದ್ದಿವಂತಿಕೆ ಬೆಳವಣಿಗೆಯಾಗಲು ಚೆಸ್ ಸಹಕರಿಯಾಗಿದೆ. ದೇಶದ ಹಲವು ಭಾಗಗಳಿಂದ ಮಂಗಳೂರಿಗೆ ಚೆಸ್ ಟೆಸ್ಟ್ ಗೆ ಜನ ಬರುತ್ತಿದ್ದಾರೆ ಎಂದರು.
ಬಳಿಕ ಮಾತನಾಡಿದ ಚೆಸ್ ಅಸೋಸಿಯೇಷನ್ ಗೌರವಾಧ್ಯಕ್ಷರಾದ ಸುನಿಲ್ ಆಚಾರ್ ಮಾತನಾಡಿ ಮಂಗಳೂರಿಗರು ಹೆಚ್ಚಾಗಿ ಚೆಸ್ ಆಡುವ ಮೂಲಕ ಮಂಗಳೂರನ್ನು ಚೆಸ್ ಹಬ್ ಮಾಡಬೇಕೆಂದು ಅಭಿಪ್ರಾಯ ಪಟ್ಟರು.
ಈ ಪತ್ರಿಕಾಗೋಷ್ಟಿಯಲ್ಲಿ ಗೌರವಾಧ್ಯಕ್ಷರಾದ ಸುನಿಲ್ ಆಚಾರ್, ಅಧ್ಯಕ್ಷರಾದ ರಮೇಶ್ ಕೋಟೆ, ಉಪಾಧ್ಯಕ್ಷರಾದ ವಾಣಿ ಎಸ್. ಪಣಿಕ್ಕರ್, ಕಾರ್ಯದರ್ಶಿ ಅಭಿಷೇಕ್ ಕಟ್ಟೆಮಾರ್, ಜತೆಕಾರ್ಯದರ್ಶಿ ಸತ್ಯಪ್ರಸಾದ್ ಕೆ. ಮತ್ತಿತರು ಉಪಸ್ಥಿತರಿದ್ದರು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…