ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಜನಿವಾರ ಮತ್ತು ಮಂಗಳಸೂತ್ರ ತೆಗೆಸಬಾರದು ಎಂದು ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.
‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ ಎಂದು ತಿಳಿಸಲು ಸಂತೋಷವಾಗುತ್ತಿದೆ. ಮಂಗಳಸೂತ್ರ ಹಾಗೂ ಧಾರ್ಮಿಕ ಸಂಕೇತಗಳನ್ನು ತೆಗೆಯಬೇಕೆಂದು ಹಾಲ್ಟಿಕೆಟ್ನಲ್ಲಿ ಉಲ್ಲೇಖಿಸಲ್ಪಟ್ಟಿದ್ದ ಬಗ್ಗೆ ನಾವು ಅವರ ಗಮನಕ್ಕೆ ತಂದಿದ್ದೆವು. ಅವರು ಮಧ್ಯಪ್ರವೇಶಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ’ ಎಂದು ಎಕ್ಸ್ ಸಂದೇಶದ ಮೂಲಕ ಬ್ರಿಜೇಶ್ ಚೌಟ ಸ್ಪಷ್ಟಪಡಿಸಿದ್ದಾರೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…