ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ; ಹಿಂದೂ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

 ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಖಾಸಗಿ ಕಾಲೇಜಿನ ವಿದ್ಯಾರ್ಥಿ, ವಾಲಿಬಾಲ್ ಆಟಗಾರ ಸೈಯದ್​​ ಎಂಬಾತನ ಕಾಮ ಸ್ವರೂಪ ಬಯಲಾಗಿದೆ. ವಿದ್ಯಾರ್ಥಿನಿಗೆ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ಹಿನ್ನಲೆ ಹಿಂದೂ ಸಂಘಟನೆ ಕಾರ್ಯಕರ್ತರಿಂದ ಆತನ ಮೇಲೆ ಹಲ್ಲೆ ಮಾಡಲಾಗಿದೆ. ಈ ವೇಳೆ ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ನೂರಾರು ಹುಡುಗಿಯರ ಜೊತೆಗಿನ ಸರಸ ಸಲ್ಲಾಪದ ವಿಡಿಯೋಗಳು ಪತ್ತೆಯಾಗಿವೆ. ಸದ್ಯ ಬೆಳ್ತಂಗಡಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಆತನನ್ನು ಬಂಧಿಸಿದ್ದಾರೆ.

ಸೈಯದ್​ ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದು, ಓರ್ವ ವಿದ್ಯಾರ್ಥಿನಿಗೆ ಈತ ಮೆಸೇಜ್ ಮೂಲಕ ಲೈಂಗಿಕ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

ಇನು ಈ ಘಟನೆ ವೇಳೆ ಸೈಯದ್​​ ಮೊಬೈಲ್ ಕಿತ್ತುಕೊಂಡು ನೋಡಿದಾಗ ಆತನ ಮೊಬೈಲ್​ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳನ್ನು ಬೆಳಕಿಗೆ ಬಂದಿದೆ.

ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್​​ ಕೂಡ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಹೀಗಾಗಿ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧವೂ ಎಫ್​ಐಆರ್​ ದಾಖಲಾಗಿದೆ. ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!