ಹಿಂದೂ ಸಂಘಟನೆ ಹಾಗೂ ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಹಿಂದೂ ದಂಪತಿಗೆ ತಲವಾರು ಹಿಡಿದು ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಠಾಣೆಯಲ್ಲಿ ದಾಖಲಾಗಿದೆ.
ದೂರುದಾರ ಬಂಟ್ವಾಳ ತಾಲೂಕಿನ ಹರೀಶ್ ಅವರು ನೀಡಿದ ದೂರಿನಂತೆ, ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿಯೊಬ್ಬಳೇ ಇದ್ದ ಸಮಯದಲ್ಲಿ ಮನೆಗೆ ಬಂದಿದ್ದ ಹಸಂತಡ್ಕ, “ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಪಂಪ್ ಬಿಟ್ಟು ಕೊಡುವಂತೆ ಹೇಳು” ಎಂದು ಹರೀಶ್ ಪತ್ನಿ ಶ್ರೀದೇವಿ ಅವರಿಗೆ ಬೆದರಿಕೆಯೊಡ್ಡಿದ್ದಾಗಿ ಹೇಳಲಾಗಿದೆ. ಅಷ್ಟೇ ಅಲ್ಲದೇ, ಎಪ್ರಿಲ್ 19 ರಂದು ಮತ್ತೊಮ್ಮೆ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ತಲ್ವಾರ್ ಹಿಡಿದುಕೊಂಡು ಬಂದು ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ. ಈ ಕುರಿತು ನ್ಯಾಯಾಲಯದ ಆದೇಶದಂತೆ ವಿಟ್ಲ ಠಾಣೆಯಲ್ಲಿ ಬಿಜೆಪಿ ಮುಖಂಡ ಮುರಳೀಕೃಷ್ಣ ಹಸಂತಡ್ಕ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹರೀಶ್ ಪತ್ನಿ ಶ್ರೀದೇವಿ ಹಾಗೂ ಮುರಳೀಕೃಷ್ಣ ಹಸಂತಡ್ಕ ಸಾರಡ್ಕದ HP ಪೆಟ್ರೋಲ್ ಪಂಪ್‌ನಲ್ಲಿ ಪಾಲುದಾರಿಕೆ ಹೊಂದಿದ್ದು, ಇದೇ ವಿಚಾರವಾಗಿ ಬೆದರಿಕೆಯೊಡ್ಡಿರುವುದಾಗಿ ತಿಳಿದುಬಂದಿದೆ.
ಭಾರತೀಯ ಕರಾವಳಿ ಕಾವಲು ಪಡೆ ಹಾಗೂ ಗುಜರಾತ್ ಭಯೋತ್ಪಾದನಾ ನಿಗ್ರಹ ದಳ (ATS) ಜಂಟಿ ಕಾರ್ಯಾಚರಣೆ ನಡೆಸಿ ಅರಬ್ಬಿ ಸಮುದ್ರದಲ್ಲಿ…
ಮಂಗಳೂರು ರಿಫೈನರಿ ಆ್ಯಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ (MRPL)ನಲ್ಲಿ ಇಂದು ಮಧ್ಯಾಹ್ನ ಕೋಕರ್ ಹೈಡ್ರೋ ಟ್ರೀಟರ್ ಘಟಕದಲ್ಲಿ ಘಟನೆ ಸಂಭವಿಸಿದ್ದು, ಘಟನಾ…
ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲು ಪ್ರದೇಶವನ್ನು ಅ.1ರ ಮಧ್ಯರಾತ್ರಿಯಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆಗೊಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಹೊಸ ವಿಭಾಗೀಯ…
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಲೆಗಳ ಆರಂಭದ ಸಮಯದಲ್ಲಿ ಬದಲಾವಣೆ…
ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮ ಪೀಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ ಪಂಚಾಶತ್…
ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗೆ ಅವಧಿ ಮೀರಿದ ಮಾತ್ರೆಗಳನ್ನು ವಿತರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಆಸ್ಪತ್ರೆ ಆಡಳಿತ…