ಜನ ಮನದ ನಾಡಿ ಮಿಡಿತ

Advertisement

ಮಗನ ಕಾಲೇಜು ಶುಲ್ಕ ಪಾವತಿಸಲಾಗದೆ ಸ್ವಯಂ ಪ್ರಾಣತ್ಯಾಗ ಮಾಡಿದ ತಾಯಿ – ಅಪಘಾತದಲ್ಲಿ ಸತ್ತರೆ ಸರಕಾರದಿಂದ ಸಹಾಯ ಸಿಗುತ್ತದೆಂದು ಭಾವಿಸಿದ್ದ ಮಹಿಳೆ

ಮಗನ ಕಾಲೇಜು ಶುಲ್ಕ 45,000 ರೂಪಾಯಿ ಪಾವತಿಸಲು ಪರದಾಡುತ್ತಿದ್ದ ಮಹಿಳೆಯೊಬ್ಬರು, ಚಲಿಸುತ್ತಿದ್ದ ಬಸ್ಸಿಗೆ ಸ್ವಯಂ ಜಿಗಿದು ಪ್ರಾಣ ಕಳೆದುಕೊಂಡ ಹೃದಯ ವಿದ್ರಾವಕ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟರೆ ಸರ್ಕಾರದಿಂದ ನೆರವು ಸಿಗುತ್ತದೆಂದು ಈ ಮಹಿಳೆ ಹೀಗೆ ಮಾಡಿದ್ದಾಳೆ. ಜೂ.28ರಂದು ಈ ಘಟನೆ ನಡೆದಿದ್ದು, ಪೊಲೀಸರು ಅಪಘಾತ ಪ್ರಕರಣವೆಂದು ದಾಖಲಿಸಿಕೊಂಡಿದ್ದರು.

ಆದರೆ, ಬಳಿಕ ನಡೆದ ತನಿಖೆಯಲ್ಲಿ ಮಹಿಳೆಯು ಸ್ವಯಂ ಇಚ್ಛೆಯಿಂದ ಬಸ್ ನಡಿಗೆ ಬಿದ್ದಿರುವ ವೀಡಿಯೊ ಪತ್ತೆಯಾಗಿದೆ. ಬಸ್ ಬರುವುದನ್ನು ಗಮನಿಸಿಯೇ ಮಹಿಳೆ ಬಸ್ ನತ್ತ ಮುನ್ನುಗ್ಗಿರುವುದು ಕಂಡುಬಂದಿದೆ. ಸೇಲಂನ 45ರ ಹರೆಯದ ಪಾಪತಿ ಎಂಬ ಮಹಿಳೆ ತನ್ನ ಮಗನ ಕಾಲೇಜು ಶುಲ್ಕ 45,000 ರೂ. ಪಾವತಿಸಲಾಗದೆ ಖಿನ್ನತೆಗೊಳಗಾಗಿದ್ದರು. ಅಪಘಾತದಲ್ಲಿ ಮೃತಪಟ್ಟರೆ ಸರಕಾರದಿಂದ ಆರ್ಥಿಕ ನೆರವು ಸಿಗುತ್ತದೆ ಎಂದು ಯಾರೋ ಹೇಳಿದ್ದನ್ನು ಕೇಳಿ, ಕಲೆಕ್ಟರ್ ಕಚೇರಿಯಲ್ಲಿ ನೈರ್ಮಲ್ಯ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆ ಸ್ವಯಂ ಪ್ರಾಣ ತ್ಯಾಗ ಮಾಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

error: Content is protected !!