ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ಭಾನುವಾರ ಭೀಕರ ಅಪಘಾತ ಸಂಭವಿಸಿದೆ . ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದು, ಕೆಲವರು ಗಾಯಗೊಂಡಿದ್ದಾರೆ. ಜಿಲ್ಲೆಯ ನಾರಾಯಣಗಢ ಪೊಲೀಸ್ ಠಾಣೆ ವ್ಯಾಪ್ತಿಯ ಕಚರಿಯಾ ಗ್ರಾಮದಲ್ಲಿ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಆಳವಾದ ಬಾವಿಗೆ ಬಿದ್ದಿದೆ. ಇದರಿಂದಾಗಿ 12 ಜನರು ಸಾವನ್ನಪ್ಪಿದ್ದಾರೆ. ಬಾವಿಗೆ ಬಿದ್ದವರನ್ನು ರಕ್ಷಿಸಲು ಹೋದ ಸ್ಥಳೀಯ ಯುವಕನೂ ಮೃತಪಟ್ಟಿರುವುದಾಗಿ ವರದಿಯಾಗಿದೆ.
ಡಿಐಜಿ ಮನೋಜ್ ಸಿಂಗ್ ಅಧಿಕೃತವಾಗಿ ಸಾವನ್ನು ದೃಢಪಡಿಸಿದ್ದಾರೆ. ಉನ್ಹೆಲ್ ಮತ್ತು ರತ್ಲಂ ಜಿಲ್ಲೆಗಳ ಜನರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಗುರ್ತಿಸಲಾಗಿದೆ. ಇವರೆಲ್ಲಾ ನೀಮುಚ್ ಜಿಲ್ಲೆಯ ದೇವಸ್ಥಾನಕ್ಕೆ ಭೇಟಿ ನೀಡಲು ರತ್ಲಾಮ್‌ನ ಖೋಜಂಖೇಡಾ ಗ್ರಾಮದ ಮೂಲಕ ಸಂಚರಿಸುತ್ತಿದ್ದರು. ದಾರಿಯಲ್ಲಿ ವ್ಯಾನ್ ಬೈಕ್‌ಗೆ ಡಿಕ್ಕಿ ಹೊಡೆದಿದೆ.ಇದಾದ ನಂತರ, ವ್ಯಾನ್ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮುಚ್ಚದ ಬಾವಿಗೆ ಬಿದ್ದಿದೆ. ಘಟನೆಯನ್ನು ನೋಡುತ್ತಿದ್ದ ಸ್ಥಳೀಯ ಯುವಕನೊಬ್ಬ ಧೈರ್ಯ ಪ್ರದರ್ಶಿಸಿ ಜನರನ್ನು ರಕ್ಷಿಸಲು ಬಾವಿಗೆ ಹಾರಿದ್ದಾನೆ. ಕೊನೆಗೆ ಆತನೂ ಸಾವನ್ನಪ್ಪಿದ್ದಾನೆ.
ಅಪಘಾತದ ಬಗ್ಗೆ ಮಾಹಿತಿ ಬಂದ ತಕ್ಷಣ, ಪೊಲೀಸರು ಸೇರಿದಂತೆ ಆಡಳಿತ ಸಿಬ್ಬಂದಿ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯ ಆರಂಭಿಸಿದ್ದಾರೆ. ಬಾವಿಗೆ ಬಿದ್ದ ಜನರನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಮನೋಹರ್ ಸಿಂಗ್ ಎಂಬ ಸ್ಥಳೀಯ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.
ಕಾರಿನಲ್ಲಿ 13 ಜನರು ಪ್ರಯಾಣಿಸುತ್ತಿದ್ದು, ಈ ಅಪಘಾತದಲ್ಲಿ 12 ಜನರು ಸಾವನ್ನಪ್ಪಿದ್ದಾರೆ. ಬಾವಿಗೆ ಬಿದ್ದ ನಂತರ, ವ್ಯಾನ್‌ನಿಂದ ಎಲ್‌ಪಿಜಿ ಅನಿಲ ಸೋರಿಕೆಯಾಗಲು ಪ್ರಾರಂಭಿಸಿದೆ. ಇದರಿಂದಾಗಿ ಒಳಗೆ ಸಿಲುಕಿದ್ದ ಜನರಿಗೆ ಉಸಿರುಗಟ್ಟುವಿಕೆ ಉಂಟಾಗಿ ಜನರ ಸಾವಿಗೆ ಕಾರಣವಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…