ಜನ ಮನದ ನಾಡಿ ಮಿಡಿತ

Advertisement

ಪಾಕಿಸ್ತಾನದ 1,200 ರಕ್ಷಣಾಧಿಕಾರಿ, ಸೈನಿಕರ ರಾಜೀನಾಮೆ

ಪಹಲ್ಗಾಮ್‌ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ. ಭಾರತದ ಸೇನೆಯ ಈ ಸಮರಾಭ್ಯಾಸ ಪಾಕಿಸ್ತಾನಕ್ಕೆ ನಡುಕವನ್ನು ಉಂಟು ಮಾಡಿದೆ.

ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರಿಂದ ಪಾಕಿಸ್ತಾನ ಸೈನಿಕರ ಮನೋಸ್ಥೈರ್ಯ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್‌ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.

ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್‌ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.

ಪಾಕ್‌ ಸೇನಾ ಮುಖ್ಯಸ್ಥ ಅಸೀಮ್ ಮುನೀರ್‌ ಮೇಲೆ ಸೈನಾಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಈ ಹಿಂದೆಯೇ ಸೇನಾಧಿಕಾರಿಗಳು ಪಾಕ್‌ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಭಾರತ- ಪಾಕ್ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ 1,200 ಮಂದಿ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ಸಲ್ಲಿಸಿದ್ದಾರೆ. ಪಾಕ್ ಸೇನೆಯಲ್ಲಿ ಸೇನಾ ಮುಖ್ಯಸ್ಥರ ವಿರುದ್ಧವೇ ಭಾರೀ ಅಸಮಾಧಾನ ಸ್ಫೋಟವಾಗಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!