ಪಹಲ್ಗಾಮ್ ದಾಳಿಯ ಬಳಿಕ ಜಮ್ಮು ಕಾಶ್ಮೀರದ ಗಡಿಯಲ್ಲಿ ಗುಂಡಿನ ಚಕಮಕಿ ಮುಂದುವರಿದಿದೆ. ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಿರುವ ಪಾಕ್ ಸೇನೆಯನ್ನು ಗಡಿಯಲ್ಲಿ ಭಾರತದ ಯೋಧರು ಹಿಮ್ಮೆಟ್ಟಿಸುತ್ತಿದ್ದಾರೆ. ಭಾರತದ ಸೇನೆಯ ಈ ಸಮರಾಭ್ಯಾಸ ಪಾಕಿಸ್ತಾನಕ್ಕೆ ನಡುಕವನ್ನು ಉಂಟು ಮಾಡಿದೆ.
ಭಾರತದಿಂದ ಪಾಕಿಸ್ತಾನದ ಮೇಲೆ ಯಾವುದೇ ಕ್ಷಣದಲ್ಲಾದರೂ ದಾಳಿ ಮಾಡುವ ಭೀತಿ ಎದುರಾಗಿದೆ. ಇದರಿಂದ ಪಾಕಿಸ್ತಾನ ಸೈನಿಕರ ಮನೋಸ್ಥೈರ್ಯ ಸಂಪೂರ್ಣವಾಗಿ ಕುಸಿದಿದೆ. ಇದರ ಪರಿಣಾಮವಾಗಿ ಬರೋಬ್ಬರಿ 1,200 ಮಂದಿ ಪಾಕ್ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ನೀಡಿದ್ದಾರೆ.
ಪಾಕಿಸ್ತಾನದ ಸೇನಾ ಆಫೀಸರ್, ಸೈನಿಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದಕ್ಕೆ ಭಾರತದ ಯುದ್ಧದ ಭೀತಿ ಒಂದು ಕಾರಣವಾದ್ರೆ, ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ನಡೆ, ಧೋರಣೆ ಮತ್ತೊಂದು ಪ್ರಮುಖ ಕಾರಣವಾಗಿದೆ.
ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ಮೇಲೆ ಸೈನಾಧಿಕಾರಿಗಳು ಅಸಮಾಧಾನಗೊಂಡಿದ್ದಾರೆ. ಈ ಹಿಂದೆಯೇ ಸೇನಾಧಿಕಾರಿಗಳು ಪಾಕ್ ಸೇನಾ ಮುಖ್ಯಸ್ಥ ಅಸೀಮ್ ಮುನೀರ್ ರಾಜೀನಾಮೆಗೆ ಆಗ್ರಹಿಸಿದ್ದರು. ಈಗ ಭಾರತ- ಪಾಕ್ ಯುದ್ಧ ಭೀತಿಯ ಹಿನ್ನೆಲೆಯಲ್ಲಿ ಏಪ್ರಿಲ್ ತಿಂಗಳಲ್ಲಿ 1,200 ಮಂದಿ ಸೇನಾ ಆಫೀಸರ್, ಸೈನಿಕರು ರಾಜೀನಾಮೆ ಸಲ್ಲಿಸಿದ್ದಾರೆ. ಪಾಕ್ ಸೇನೆಯಲ್ಲಿ ಸೇನಾ ಮುಖ್ಯಸ್ಥರ ವಿರುದ್ಧವೇ ಭಾರೀ ಅಸಮಾಧಾನ ಸ್ಫೋಟವಾಗಿದೆ.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ‍್ಯರ‍್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್‌ನಲ್ಲಿ ಖಾಸಗಿ ಬಸ್‌ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…