ನವದೆಹಲಿ: ಭಾರತದ ವಿರುದ್ಧವಾಗಿ ದ್ವೇಷ ಹಾಗೂ ನಕಲಿ ಸುದ್ದಿ ಪ್ರಸಾರ ಮಾಡುತ್ತಿರುವ ಪಾಕಿಸ್ತಾನದ 17 ಯೂಟ್ಯೂಬ್ ಚಾನೆಲ್ ಗಳನ್ನು ಕೇದ್ರ ಸರ್ಕಾರ ಬ್ಲಾಕ್ ಮಾಡಿದೆ ಎಂದು ತಿಳಿದುಬಂದಿದೆ.

ಕೋಮು ಉದ್ವಿಗ್ನತೆಯನ್ನು ಪ್ರಚೋದಿಸುವ ಮತ್ತು ಭಾರತದ ಸಾರ್ವಭೌಮತ್ವ ಮತ್ತು ಭದ್ರತೆಯನ್ನು ದುರ್ಬಲಗೊಳಿಸುವ ಗುರಿಯನ್ನು ಹೊಂದಿರುವ ಪ್ರಚೋದನಕಾರಿ, ಸುಳ್ಳು ಸುದ್ದಿಗಳನ್ನು ಹರಡಿದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಾಕಿಸ್ತಾನದ ಪ್ರಮುಖ ಸುದ್ದಿ ಸಂಸ್ಥೆಗಳು ಮತ್ತು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಸೇರಿದಂತೆ 16 ಪಾಕಿಸ್ತಾನಿ ಯೂಟ್ಯೂಬ್ ಚಾನೆಲ್‌ಗಳನ್ನು ನಿಷೇಧಿಸಿದೆ ಎಂದ ಮೂಲಗಳು ತಿಳಿಸಿವೆ.
ದಿ ಪಾಕಿಸ್ತಾನ್ ರೆಫರೆನ್ಸ್, ಸಮಾ ಸ್ಪೋರ್ಟ್ಸ್, ಉಜೈರ್ ಕ್ರಿಕೆಟ್. ರಾಜಿ ನಾಮಾ, ಡಾನ್ ನ್ಯೂಸ್, ಸಮಾ ಟಿವಿ, ಎಆರ್‌ವೈ ನ್ಯೂಸ್, ಬೋಲ್ ನ್ಯೂಸ್, ಜಿಯೋ ನ್ಯೂಸ್, ರಫ್ತಾರ್ ಮತ್ತು ಸುನೋ ನ್ಯೂಸ್‌ನಂತಹ ಪ್ರಮುಖ ಪಾಕಿಸ್ತಾನಿ ಸುದ್ದಿವಾಹಿನಿಗಳನ್ನು ನಿಷೇಧಿಸಲಾಗಿದೆ ಎಂದು ತಿಳಿದುಬಂದಿದೆ.



