ಜನ ಮನದ ನಾಡಿ ಮಿಡಿತ

Advertisement

ಮಂಗಳೂರು : ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ; ಕೊಲೆ ಶಂಕೆ

ಮಂಗಳೂರಿನ ಕುಡುಪು ಬಳಿ ಆದಿತ್ಯವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗುತ್ತಿದ್ದು, ಈತನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಬಳಿಯಲ್ಲಿ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಈ ಯುವಕ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹತ್ಯೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

ಉಡುಪಿ: ಕೊಲೆ ಯತ್ನ ಪ್ರಕರಣದ ಇಬ್ಬರು ಆರೋಪಿಗಳ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ…!

ಉಡುಪಿ: ಉಡುಪಿಯಲ್ಲಿ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್ ಕಳವು: ಮುದ್ದಾಡಿ ಹಾಡಿಯಲ್ಲಿ ಪತ್ತೆ…!

ಮಂಗಳೂರು: ವಿದ್ಯಾರ್ಥಿಗಳ ಕೊರತೆಯಿಂದ ಮಂಗಳೂರು ವಿವಿಯ 16 ಪಿಜಿ ಕೋರ್ಸ್‌ಗಳು ಸ್ಥಗಿತ.

ಮಂಗಳೂರು: ಮಂಗಳೂರು-ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಹೊಸ ಆಶಾಕಿರಣ

ಮಂಗಳೂರು: ನ್ಯಾಯಾಧೀಶರ ಕಾರಿಗೆ ಗೂಡ್ಸ್ ಆಟೋ ಡಿಕ್ಕಿ: ಗಾಯಗೊಂಡಿದ್ದ ಚಾಲಕ ಸಾವು

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆ, ಪ್ರವಾಹ-ಭೂಕುಸಿತಕ್ಕೆ 27 ಮಂದಿ ಬಲಿ; ನಾಲ್ವರು ನಾಪತ್ತೆ…!

ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಮುಳುಗಿ ಮೃತ್ಯು…!

ಬಂಟ್ವಾಳ: ಮಾಣಿ ಭಾಗದಲ್ಲಿ ಮಾರ್ಗಸೂಚಿ ಫಲಕಗಳ ಕೊರತೆ: ವಾಹನ ಸವಾರರಿಗೆ ಗೊಂದಲ, ಅಪಘಾತದ ಆತಂಕ

ಬಂಟ್ವಾಳ: ಕಲ್ಲಡ್ಕ ಫ್ಲೈಓವರ್‌ನಲ್ಲಿ ದನ ಸಾಗಿಸುತ್ತಿದ್ದ ಲಾರಿ ತಡೆ: ಪೊಲೀಸರಿಂದ ವಾಹನ ವಶಕ್ಕೆ

error: Content is protected !!