ಮಂಗಳೂರಿನ ಕುಡುಪು ಬಳಿ ಆದಿತ್ಯವಾರ ಸಂಜೆ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆಶಂಕೆ ವ್ಯಕ್ತವಾಗಿದೆ. ಮೃತ ಯುವಕ ಉತ್ತರ ಭಾರತ ಮೂಲದವನು ಎನ್ನಲಾಗುತ್ತಿದ್ದು, ಈತನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.
ಕುಡುಪು ಕಟ್ಟೆ ಬಳಿಯಲ್ಲಿ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಈ ಯುವಕ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ ಎನ್ನಲಾಗಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಹತ್ಯೆಗೀಡಾದ ವ್ಯಕ್ತಿ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ.
ಇನ್ನು ಘಟನೆ ನಡೆದ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕೊಲೆ ಯತ್ನ ಪ್ರಕರಣದ ಆರೋಪಿಗಳಿಬ್ಬರ ಮೃತದೇಹಗಳು ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದ…
ಉಡುಪಿ ನಗರದ ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗ ನಿಲ್ಲಿಸಿದ್ದ ಶ್ರೀ ದುರ್ಗಾಂಬ ಬಸ್‌ವೊಂದು ಕಳವಾಗಿರುವ ಘಟನೆ ಸೆ.29ರಂದು ಬೆಳಕಿಗೆ ಬಂದಿದ್ದು,…
ಮಂಗಳೂರು ವಿಶ್ವವಿದ್ಯಾನಿಲಯದ 16 ಸ್ನಾತಕೋತ್ತರ ಪದವಿ ಕೋರ್ಸ್‌ಗಳನ್ನು 2026-27ನೇ ಶೈಕ್ಷಣಿಕ ಸಾಲಿನಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೋರ್ಸ್‌ಗಳನ್ನು ಮುಂದುವರಿಸಲು ಅಗತ್ಯವಿರುವಷ್ಟು ವಿದ್ಯಾರ್ಥಿಗಳು…
ಮಂಗಳೂರು ಮತ್ತು ಉಡುಪಿ ಸೇರಿದಂತೆ ಕರಾವಳಿ ಕರ್ನಾಟಕ ಭಾಗದಲ್ಲಿ ಕರ್ನಾಟಕ ಹೈಕೋರ್ಟ್‌ನ ಸರ್ಕ್ಯೂಟ್ ಬೆಂಚ್ ಅಥವಾ ಶಾಶ್ವತ ಪೀಠ ಸ್ಥಾಪಿಸುವ…
ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರು ಪ್ರಯಾಣಿಸುತ್ತಿದ್ದ ಕಾರಿಗೆ ಗೂಡ್ಸ್ ಆಟೋ ರಿಕ್ಷಾ ಡಿಕ್ಕಿಯಾಗಿ, ತೀವ್ರವಾಗಿ ಗಾಯಗೊಂಡಿದ್ದ ಆಟೋ…
ನೇಪಾಳದಲ್ಲಿ ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪ್ರವಾಹ ಹಾಗೂ ಭೂಕುಸಿತ ಸಂಭವಿಸಿದ್ದು, ಸೆ.24ರಿಂದ ಈವರೆಗೆ ಕನಿಷ್ಠ…